ಪಡುಬಿದ್ರಿ: ಶಂಶು ಎಂಬುವರು ಸುರತ್ಕಲ್ ಕೃಷ್ಣಾಪುರ ಮದರಸದ ಉಸ್ತಾದ್ ಅವರಿಗೆ ಹಲ್ಲೆ ವಾಡಿರುವ ವಿಚಾರಕ್ಕೆ ಸಂಬಂಧಿಸಿ ಸಾವಾಜಿಕ ಜಾಲತಾಣ ವಾಟ್ಸಾೃಪ್ ಗ್ರೂಪ್‌ನಲ್ಲಿ ಖಂಡಿಸಿರುವ ವಿಚಾರಕ್ಕೆ ಮೊಹಮ್ಮದ್ ಆಸೀಫ್ ಅವರಿಗೆ ಜೀವ ಬೆದರಿಕೆ ಹಾಗೂ ಅವರ ಪತ್ನಿಗೆ ಅಪರಿಚಿತ ಮೊಬೈಲ್ ಸಂಖ್ಯೆಗಳಿಂದ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸೀಫ್ ಪತ್ನಿ ವಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಈ ವಿಚಾರ ಕೇಳಿ ಇನ್ನೂ ವಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎಂದು ಆಸೀಫ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಶಾಂತಿಭಂಗ, ಮೂವರ ವಿರುದ್ಧ ಕೇಸ್
ಪಡುಬಿದ್ರಿ: ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ಶಾಂತಿಭಂಗ ವಾಡಿರುವ ಆರೋಪದಲ್ಲಿ ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್, ರಿತಿಕ್ ಹಾಗೂ ವಿನೋದ್ ಎಂಬುವರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ಠಾಣೆ ಪೊಲೀಸ್ ಸಿಬ್ಬಂದಿ ಶನಿವಾರ ರಾತ್ರಿ ಗಸ್ತಿನಲ್ಲಿರುವ ವೇಳೆ ಆರೋಪಿಗಳು ನಡ್ಸಾಲು ಗ್ರಾಮದ ಕಲ್ಲಟ್ಟೆ ಎಂಬಲ್ಲಿರುವ ಅಂಬೇಡ್ಕರ್ ಭವನದ ಎದುರು ಸಾರ್ವಜನಿಕ ರಸ್ತೆಯಲ್ಲಿ ಕಾರನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ತಮ್ಮೊಳಗೆ ಜಗಳವಾಡುತ್ತಾ ಅವಾಚ್ಯವಾಗಿ ಬೈದಾಡಿಕೊಂಡು ಕೈ ಕೈ ಮಿಲಾಯಿಸುತ್ತಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಹಾಗೂ ಇತರ ಇಬ್ಬರು ಜಗಳ ಬಿಡಿಸಲು ಪ್ರಯತ್ನಿಸಿದ್ದರೂ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ವಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಕೂಟರ್ ಸ್ಕಿಡ್, ಯುವಕ ಸಾವು
ಪಡುಬಿದ್ರಿ: ರಾಜ್ಯ ಹೆದ್ದಾರಿ 1ರ ನಂದಿಕೂರು ಬಸ್ ನಿಲ್ದಾಣದ ಬಳಿಯ ರಸ್ತೆ ಉಬ್ಬಿನಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಸವಾರ ಮೂಲ್ಕಿ ಲಿಂಗಪ್ಪಯ್ಯಕಾಡು ನಿವಾಸಿ ಕಿರಣ್ ಕಟ್ಟಿಮನೆ(22) ಎಂಬುವರು ಶನಿವಾರ ಮೃತಪಟ್ಟಿದ್ದಾರೆ.
ಮೂಲ್ಕಿಯಿಂದ ಪಡುಬಿದ್ರಿಗೆ ತನ್ನ ತಂದೆ ಮಲ್ಲಿಕಾರ್ಜುನ ಆರ್.ಕೆ. ಅವರು ನಡೆಸುತ್ತಿದ್ದ ಫ್ಯಾಕ್ಟರಿಗೆ ತಂದೆಗೆ ಊಟ ಕೊಂಡೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿದೆ. ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದ ಕಿರಣ್ ಅವರು ರಜೆಯಲ್ಲಿ ಊರಿಗೆ ಬಂದಿದ್ದರು. ಅಪಘಾತದಿಂದ ತಲೆಗೆ ತೀವ್ರ ಗಾಯಗೊಂಡಿದ್ದ ಅವರನ್ನು ಸಾರ್ವಜನಿಕರು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರುವಷ್ಟರಲ್ಲೇ ಮೃತಪಟ್ಟಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.