ಕಠಿಣ ಪರಿಶ್ರಮದಿಂದ ಯಶಸ್ಸು

 ವಿಕ್ರಂ ಟ್ರೋಫಿ ಕ್ರಿಕೆಟ್ ಪಂದ್ಯಾಟದ ಸವಾರೋಪದಲ್ಲಿ ವಿಜೇತ ತಂಡಗಳಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಟ್ರೋಫಿ ವಿತರಿಸಿದರು. ಪ್ರಮುಖರಾದ ನಾಗರಾಜ ಶೆಟ್ಟಿ, ಗಿರೀಶ್ ಬೈಂದೂರು, ಕರ್ನೋಲಿಯಸ್ ಪ್ರಸಾದ್ ಮೊದಲಾದವರಿದ್ದರು.
ವಿಕ್ರಂ ಟ್ರೋಫಿ ಕ್ರಿಕೆಟ್ ಪಂದ್ಯಾಟದ ಸವಾರೋಪದಲ್ಲಿ ವಿಜೇತ ತಂಡಗಳಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಟ್ರೋಫಿ ವಿತರಿಸಿದರು. ಪ್ರಮುಖರಾದ ನಾಗರಾಜ ಶೆಟ್ಟಿ, ಗಿರೀಶ್ ಬೈಂದೂರು, ಕರ್ನೋಲಿಯಸ್ ಪ್ರಸಾದ್ ಮೊದಲಾದವರಿದ್ದರು.
Published on
ಬೈಂದೂರು: ಪ್ರತಿಭೆಗಳು ಎಳವೆಯಿಂದಲೇ ಉತ್ತಮ ತರಬೇತಿಯೊಂದಿಗೆ ಶಿಸ್ತು ಮೈಗೂಡಿಸಿಕೊಂಡು ಕಠಿಣ ಪರಿಶ್ರಮಪಟ್ಟು ಅಭ್ಯಾಸ ವಾಡಿದಾಗ ಯಶಸ್ಸು ಸಾಧ್ಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಹೇಳಿದರು.
ಬೈಂದೂರು ಗಾಂಧಿ ಮೈದಾನದಲ್ಲಿ ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲಾ ಇಂಟರ್ ಕ್ಯಾಂಪಸ್ ಅಕಾಡೆಮಿ ಆಟಗಾರರ ಅಂಡರ್-23 ಲೆದರ್ ಬಾಲ್ ಟಿ20 ನಾಕೌಟ್ ವಾದರಿಯ ಕ್ರಿಕೆಟ್ ಪಂದ್ಯಾಟ ವಿಕ್ರಂ ಟ್ರೋಫಿಯ ಸವಾರೋಪದಲ್ಲಿ ಮಾತನಾಡಿದರು.
ವಿಕ್ರಂ ಕ್ರಿಕೆಟ್ ಕ್ಲಬ್ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎರಡು ದಿನಗಳ ಕಾಲ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಜಿಲ್ಲೆಯ ಐದು ತಂಡಗಳು ಭಾಗವಹಿಸಿದ್ದವು. ಬಾಕಾ ಕೆಆರ್‌ಎಸ್‌ಎ ಪ್ರಥಮ ಸ್ಥಾನ ಹಾಗೂ ನೇತಾಜಿ ಸ್ಪೋರ್ಟ್ಸ್ ಕ್ಲಬ್ ದ್ವಿತೀಯ ಸ್ಥಾನ ಗಳಿಸಿತು.
ಶ್ರೀ ಸೇನೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು, ಏರೋವ್ಯಾಕ್ಸ್ ಇಂಡಿಯಾ ಚೆರ್‌ಮನ್, ಸಿಇಒ ಕರ್ನೋಲಿಯಸ್ ಪ್ರಸಾದ್, ಕ್ರಿಕೆಟ್ ತರಬೇತುದಾರ ವಿಜಯ್ ಆಳ್ವಾ, ಹಿರಿಯ ಕ್ರಿಕೆಟ್ ಆಟಗಾರ ಉದಯ ಕಟಪಾಡಿ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಶಿಯೇಶನ್ ಕಾರ್ಯದರ್ಶಿ ರೆನ್ ಟ್ರೆವರ್ ಡಯಾಸ್ ಮೊದಲಾದವರಿದ್ದರು.ದಿನೇಶ್ ಗಾಣಿಗ ಸ್ವಾಗತಿಸಿದರು. ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net