ಪಂದ್ಯಾಟದಿಂದ ಸಾಂಸ್ಕೃತಿಕ ಕಲೆ ಉಳಿವು

ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ
 ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ ನಡೆಯಿತು. ಪ್ರಮುಖರಾದ ಮಂಜುನಾಥ ಶೆಟ್ಟಿ ಬ್ರಹ್ಮಾವರ, ಡಾ.ಶುಭಕರಾಚಾರಿ, ಸುಕೇಶ್ ಶೆಟ್ಟಿ ಹೊಸಮಠ, ರಾಮ ಶೆಟ್ಟಿ, ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ ನಡೆಯಿತು. ಪ್ರಮುಖರಾದ ಮಂಜುನಾಥ ಶೆಟ್ಟಿ ಬ್ರಹ್ಮಾವರ, ಡಾ.ಶುಭಕರಾಚಾರಿ, ಸುಕೇಶ್ ಶೆಟ್ಟಿ ಹೊಸಮಠ, ರಾಮ ಶೆಟ್ಟಿ, ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.
Published on

ಕುಂದಾಪುರ: ಕುಸ್ತಿ ಆಟ ಭಾರತದ ಸಾಂಸ್ಕೃತಿಕ ಕಲೆ. ಇಂತಹ ಪಂದ್ಯಾಟಗಳ ಮೂಲಕ ಕುಸ್ತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ವಿಷಯ ಎಂದು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಶೆಟ್ಟಿ ಬ್ರಹ್ಮಾವರ ಹೇಳಿದರು.

ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಡುಪಿ ಮತ್ತು ಕುಂದಾಪುರ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಭಂಡಾರ್ಕರ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ, ಕುಂದಾಪುರ ತಾಲೂಕು ಪದವಿ ಪೂರ್ವ ವಿಭಾಗದ ಕ್ರೀಡಾ ಸಂಯೋಜಕ ರಾಮ ಶೆಟ್ಟಿ, ಎಸ್.ವಿ. ಪದವಿಪೂರ್ವ ಕಾಲೇಜು ಗಂಗೊಳ್ಳಿ ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.

ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಪ್ರಥಮ ಹಾಗೂ ಬ್ರಹ್ಮಾವರದ ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿತು.

ಭಂಡಾರ್ಕರ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಸರೋಜಾ ಎಂ. ಸ್ವಾಗತಿಸಿದರು. ಉಪನ್ಯಾಸಕಿ ಗೀತಾ ಪ್ರಭು ವಂದಿಸಿದರು. ವಿದ್ಯಾರ್ಥಿನಿ ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net