

ಉಡುಪಿ: ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಅ. 11ರಂದು ಬೆಳಿಗ್ಗೆ 10.30ಕ್ಕೆ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಮೂಲನಿವಾಸಿಗಳ ಸಾಂಸತಿಕ ಹಬ್ಬ ಮಹಿಷ ಮಹೋತ್ಸವ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ್ ನೇರ್ಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೋಳಿ, ರೈತ ಕೂಲಿ ಸಂಗ್ರಾಮ ಸಮಿತಿಯ ರಾಜ್ಯಾಧ್ಯಕ್ಷ ಎಂ.ಶಿವಣ್ಣ ಕಂದಗಾಲ, ಬಹುಜನ ಚಿಂತಕ ನಾರಾಯಣ ಮಂಜೂರು ಹಾಗೂ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವಿಣ್ ಕುಮಾರ್ ಭಾಗವಹಿಸಲಿದ್ದಾರೆ. ದ.ಸಂ.ಸ ರಾಜ್ಯ ಸಂಚಾಲಕ ಡಾ. ಉದಯ ಕುಮಾರ್ ತಳ್ಳೂರು, ದ.ಸಂ.ಸ ರಾಜ್ಯ ಸಂಘಟನಾ ಸಂಚಾಲಕ ಶೇಖರ ಹಾವಂಜೆ, ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಸತೀಶ್ ಕಂಬಳಗೊಡು, ದ.ಸಂ.ಸ ಉಡುಪಿ ಜಿಲ್ಲಾ ಸಂಚಾಲಕ ವಾಸುದೇವ ಮುದ್ದೂರು ಹಾಗೂ ಭೋವಿ ವಡ್ಡರ್ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಶಿವ ಕುಮಾರ್ ಪರ್ಕಳ ಉಪಸ್ಥಿತರಿರಲಿದ್ದಾರೆ ಎಂದರು.
ಸನ್ಮಾನ ಕಾರ್ಯಕ್ರಮ
ಇದೇ ಸಂದರ್ಭದಲ್ಲಿ ದಲಿತ ದೌರ್ಜನ್ಯ ಜಾಗೃತಿ ಸಮಿತಿಯ ಉಡುಪಿ ನಿರ್ದೇಶಕ ಯು. ಪರಮೇಶ್ವರ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಸನ್ಮಾನಿಸಲಾಗುವುದು. ಈ ಮಹೋತ್ಸವವು ಯಾವುದೇ ಧರ್ಮ ಅಥವಾ ಸರ್ಕಾರದ ವಿರುದ್ಧ ನಡೆಯುತ್ತಿಲ್ಲ. ಪುರಾಣ, ಮೌಢ್ಯ ಹಾಗೂ ಅವೈಜ್ಞಾನಿಕ ಸಂಪ್ರದಾಯಗಳ ವಿರುದ್ಧ ನಾಡಿನ ಮೂಲನಿವಾಸಿಗಳು ಆಚರಿಸುತ್ತಿರುವ ಹಬ್ಬ ಇದಾಗಿದೆ ಎಂದರು.
ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಯು. ಪರಮೇಶ್ವರ, ಭೋವಿ ವಡ್ಡರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಕುಮಾರ್, ಅಂಬೇಡ್ಕರ್ ಯುವಸೇನೆಯ ತಾಲೂಕು ಅಧ್ಯಕ್ಷ ವಸಂತ ಪಾಡೇಬೆಟ್ಟು, ರವಿರಾಜ್ ಲಕ್ಷಿ$್ಮನಗರ ಹಾಗೂ ಹರೀಶ್ ಸಾಲ್ಯಾನ್ ಉಪಸ್ಥಿತರಿದ್ದರು.