ಸಬಳೂರು ಉ.ಹಿ.ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಾರಿಜಾ ಬಿ. ಬಾಲಮೇಳ ಉದ್ಘಾಟಿಸಿದರು. ಅಂಗನವಾಡಿ ಕಾರ್ಯಕರ್ತೆ ಯಶೋದಾ, ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ನಿರಂಜನ್, ಪ್ರಭಾರ ಮೇಲ್ವಿಚಾರಕಿ ಭವಾನಿ ಮತ್ತಿತರರು ಇದ್ದರು.
ಕಡಬ: ಸರ್ಕಾರಿ ಸೌಲಭ್ಯಗಳ ಮಾಹಿತಿ ಅರ್ಹ ಫಲಾನುಭವಿಗಳಿಗೆ ಒದಗಿಸುವ ಮಹತ್ತರ ಜವಾಬ್ದಾರಿಯೊಂದಿಗೆ ಎಳೆಯ ಮಕ್ಕಳಿಗೆ ಸಂಸ್ಕಾರದೊಂದಿಗೆ ಪೂರ್ವಶಿಕ್ಷಣ ನೀಡಿ ಬೆಳೆಸುವ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನಾರ್ಹ ಎಂದು ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ವಾರಿಜಾ ಬಿ. ಹೇಳಿದರು.
ಏಣಿತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು, ಕೊಲ ಗ್ರಾ.ಪಂ, ಬಾಲವಿಕಾಸ ಸಮಿತಿ, ಹಳೇ ವಿದ್ಯಾರ್ಥಿ ಸಂಘ, ಪಾಲಕರ ಸಹಕಾರದೊಂದಿಗೆ ನಡೆದ ಬಾಳಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಶೈಕ್ಷಣಿಕ ಚಟುವಟಿಕೆಯೊಂದಿಗೆ ಪ್ರತಿಭೆ ಅನಾವರಣಕ್ಕೆ ಬಾಲಮೇಳದಂತಹ ಕಾರ್ಯಕ್ರಮ ವೇದಿಕೆ ಕಲ್ಪಿಸುತ್ತದೆ. ಇಂತಹ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಲು ಪಾಲಕರು ಪ್ರೋತ್ಸಾಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಭಾರ ಮೇಲ್ವಿಚಾರಕಿ ಭವಾನಿ, ಏಣಿತ್ತಡ್ಕ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ನಿರಂಜನ್ ನಾಯ್ಕ ಶುಭ ಹಾರೈಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಕಾವೇರಿ ಡಿ. ಅಧ್ಯಕ್ಷತೆ ವಹಿಸಿದ್ದರು. ಪುಟಾಣಿ ಪ್ರಣತಿ ಎ.ಎಂ., ಆಲಂಕಾರು ಸಿಎ ಬ್ಯಾಂಕ್ ಸಿಬ್ಬಂದಿ ಮಹೇಶ್ ಕಕ್ವೆ, ಸ್ಮಿತಾ ಕಕ್ವೆ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಯಶೋದಾ ಮತ್ತು ಸಹಾಯಕಿ ಚಂದ್ರಾವತಿ ಅವರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಯಶೋದಾ ವಂದಿಸಿದರು. ಶಿಕ್ಷಕ ವೆಂಕಟೇಶ್ ಅನಂತಾಡಿ ನಿರೂಪಿಸಿದರು.