ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಬಾಬಣ್ಣ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ., ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಕೊಕ್ಕರ್ಣೆ ಕ್ಲಸ್ಟರ್ ಸಿಆರ್‌ಪಿ ಪ್ರತಿಭಾ, ಜನಜಾಗೃತಿ ವೇದಿಕೆ ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಸಾದ್ ಹೆಗ್ಡೆ ಮಾರಾಳಿ, ಗ್ರಾಪಂ ನಿಕಟಪೂರ್ವ ಅಧ್ಯಕ್ಷೆ ಶೋಭಾ ಕೆ.ಪೂಜಾರಿ, ಮಾಜಿ ಅಧ್ಯಕ್ಷೆ ಕಮಲಾ, ಸಿಎ ಅವಿನಾಶ್ ರಾವ್, ನ್ಯೂ ಕರ್ನಾಟಕ ಬಿಲ್ಡರ್ಸ್ ಬ್ರಹ್ಮಾವರ ಮಾಲೀಕ ಚೇತನ್ ಕುಮಾರ್ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಹರಿಮಕ್ಕಿ, ಅಧ್ಯಕ್ಷ ರಾಘವೇಂದ್ರ ಕುಲಾಲ್, ಹಿರಿಯರಾದ ಕೋಟಿ ಕುಲಾಲ್, ಕೊಪ್ಪ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಕೃಷ್ಣ ನಾಯ್ಕ, ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ., ಹಳೇ ವಿದ್ಯಾರ್ಥಿಗಳು, ಪಾಲಕರು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕ ಕೃಷ್ಣ ನಾಯ್ಕ ಕೆ. ಸ್ವಾಗತಿಸಿ, ಪ್ರಸ್ತಾವನೆಗೈದರು. ಶಿಕ್ಷಕಿ ಜಯ ನಿರೂಪಿಸಿದರು. ಶಿಕ್ಷಕ ಲಕ್ಷ್ಮಣ ನಾಯ್ಕ ವಂದಿಸಿದರು.