ಆಸ್ಪತ್ರೆಯ ಕ್ಷೇಮ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಯೋಗ ವಿಶ್ವಮಾನ್ಯವಾಗಿದೆ. ಮಾನವನ ದೈನಂದಿನ ಚಟುವಟಿಕೆಗಳಲ್ಲಿ ಯೋಗ ಅತ್ಯಂತ ಪ್ರಾಮುಖ್ಯ ಪಡೆದಿದೆ. ಒತ್ತಡದ ದಿನಗಳಲ್ಲಿ ಪ್ರತಿಯೊಬ್ಬರೂ ದಿನದ ಒಂದು ಘಂಟೆಯಾದರೂ ಯೋಗಾಭ್ಯಾಸ ನಡೆಸಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.