ಮೀನು ಮಾರಾಟ ಫೆಡರೇಷನ್​ನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ.
ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ.
Published on

* ಶಾಸಕ ಯಶ್​ಪಾಲ್​ ಸುವರ್ಣ ಮಾಹಿತಿ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್​ (ನಿ.) ಮುಳಿಹಿತ್ಲು ಮಂಗಳೂರು ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಫೆಡರೇಷನ್​ನ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ.
ಫೆಡರೇಷನ್​ನ ಸದಸ್ಯರ ಮಕ್ಕಳು 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80, 2024-25ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಇತರ ವಿದ್ಯಾರ್ಥಿಗಳು 2025-26ನೇ ಸಾಲಿನಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2024-25ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿರಬೇಕು.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಷನ್​ನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದೆ. ಮಾಹಿತಿಗಾಗಿ ಮೊ.ಸಂ. 6364931790 ಸಂಪರ್ಕಿಸಬಹುದು. ಪ್ರತಿಭಾವಂತ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ಯಶ್​ಪಾಲ್​ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net