ಚಿತ್ರಕಲೆ ಮೂಲಕ ಧಾರ್ಮಿಕ ಪ್ರಜ್ಞೆ ಮೂಡಲಿ

ಉಡುಪಿ ಉಚ್ಚಿಲ ದಸರಾ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು. ಪ್ರಮುಖರಾದ ಜಯ ಸಿ.ಕೋಟ್ಯಾನ್, ದಯಾನಂದ ಕೆ.ಸುವರ್ಣ, ರಾಮಚಂದ್ರ ಕುಂದರ್, ವಿನಯ ಕರ್ಕೇರ, ವಾಸುದೇವ ಸಾಲ್ಯಾನ್, ಶಶಿಕಾಂತ್ ಪಡುಬಿದ್ರಿ, ಶೋಭೇಂದ್ರ ಸಾಲ್ಯಾನ್, ವನಜಾ ಪುತ್ರನ್, ಶರತ್ ಕುವಾರ್ ಶೆಟ್ಟಿ, ಶಾರಿಕಾ ಕಿರಣ್, ಆನಂದ  ಸೆಲ್ವಂ ಇದ್ದರು.

Published on: 

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಉಚ್ಚಿಲ ಮಹಾಲಕ್ಷ್ಮೀ ತಾಯಿ ಸನ್ನಿಧಿಯಲ್ಲಿ ನಡೆಯುವ ಚಿತ್ರಕಲಾ ಸ್ಪರ್ಧೆ ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಿ ಚಿತ್ರಕಲೆಯ ಮೂಲಕ ಎಳವೆಯಿಂದಲೇ ಧಾರ್ಮಿಕ ಪ್ರಜ್ಞೆ ಮೂಡುವಂತಾಗಲಿ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಮಾತನಾಡಿದರು.

ಮಲ್ಪೆ ಮೀನುಗಾರರ ಸಂಘದ ನಿಕಟಪೂರ್ವ ಅಧ್ಯಕ್ಷ ದಯಾನಂದ ಕೆ.ಸುವರ್ಣ, ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಸಹಕಾರಿ ಸಂಘ ಅಧ್ಯಕ್ಷ ರಾಮಚಂದ್ರ ಕುಂದರ್, ಉಚ್ಚಿಲ ದಸರಾ ಮಹೋತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಬ್ಯಾಂಕ್ ಉಪಾಧ್ಯಕ್ಷ ವಾಸುದೇವ ಸಾಲ್ಯಾನ್, ನಿರ್ದೇಶಕರಾದ ಶಶಿಕಾಂತ್ ಪಡುಬಿದ್ರಿ, ಶೋಭೇಂದ್ರ ಸಾಲ್ಯಾನ್, ವನಜಾ ಪುತ್ರನ್, ವ್ಯವಸ್ಥಾಪಕ ನಿರ್ದೇಶಕ ಶರತ್ ಕುವಾರ್ ಶೆಟ್ಟಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶಾರಿಕಾ ಕಿರಣ್, ಆನಂದ ಸೆಲ್ವಂ ಉಪಸ್ಥಿತರಿದ್ದರು. ಬ್ಯಾಂಕಿನ ಸಿಬ್ಬಂದಿ ವಿಜೇತಾ ಶೆಟ್ಟಿ ನಿರೂಪಿಸಿದರು.

415 ಸ್ಪರ್ಧಿಗಳು ಭಾಗವಹಿಸಿದ್ದು, ಅವರವರ ಕಲ್ಪನೆಯಲ್ಲಿ ಉಡುಪಿ ಉಚ್ಚಿಲ ದಸರಾವನ್ನು ಕುಂಚದಲ್ಲಿ ಮೂಡಿಸಿದರು.
415 ಸ್ಪರ್ಧಿಗಳು ಭಾಗವಹಿಸಿದ್ದು, ಅವರವರ ಕಲ್ಪನೆಯಲ್ಲಿ ಉಡುಪಿ ಉಚ್ಚಿಲ ದಸರಾವನ್ನು ಕುಂಚದಲ್ಲಿ ಮೂಡಿಸಿದರು.

ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಬ್ಯಾಂಕ್ ಮತ್ತು ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಸಂಸ್ಥೆ ಮೂಲಕ ಉಚ್ಚಿಲ ದಸರಾ ಮಹೋತ್ಸವಕ್ಕೆ ವಿಶೇಷ ಸಹಕಾರ ನೀಡಲಾಗುತ್ತಿದೆ. ಜತೆಗೆ ಚಿತ್ರಕಲೆ, ಕಿನ್ನಿ ಪಿಲಿ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆಗಳ ಆಯೋಜನೆ ಮೂಲಕ ದಸರಾ ಮಹೋತ್ಸವಕ್ಕೆ ಹೊಸ ಮೆರುಗು ನೀಡಿದೆ.

ಜಯ ಸಿ.ಕೋಟ್ಯಾನ್, ಅಧ್ಯಕ್ಷ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net