ಅಪಾಯಕಾರಿ ಕಾಲುಸಂಕ ಪರಿಶೀಲನೆ

  ಅಪಾಯಕಾರಿ ಕಾಲುಸಂಕವನ್ನು ಹಿರಿಯ ಸಿವಿಲ್ ನ್ಯಾಯಾಧೀಶ್ಷ ಮನು ಬಿ.ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶ, ರಾಮಲಿಂಗಪ್ಪ ಪರಿಶೀಲಿಸಿದರು.
ಅಪಾಯಕಾರಿ ಕಾಲುಸಂಕವನ್ನು ಹಿರಿಯ ಸಿವಿಲ್ ನ್ಯಾಯಾಧೀಶ್ಷ ಮನು ಬಿ.ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶ, ರಾಮಲಿಂಗಪ್ಪ ಪರಿಶೀಲಿಸಿದರು.
Published on
ಬೆಳ್ತಂಗಡಿ: ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶರು, ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ರಾಮಲಿಂಗಪ್ಪ ಭಾನುವಾರ ಪರಿಶೀಲಿಸಿದರು.
ಕಳೆದ ಬುಧವಾರ ಲಾಯಿಲ ಪರಿಶಿಷ್ಟ ಜಾತಿ/ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ವ್ಯಾಪಕ ಚರ್ಚೆ, ಮಾಧ್ಯಮಗಳ ವರದಿಯ ನಂತರ ಶುಕ್ರವಾರ ಅಧಿಕಾರಿಗಳ ದಂಡು ಈ ಪ್ರದೇಶಕ್ಕೆ ಭೇಟಿ ನೀಡಿತ್ತು. ಈಗ ಬೆಳ್ತಂಗಡಿ ನ್ಯಾಯಾಧೀಶ ಮನು ಬಿ.ಕೆ, ರಾಮಲಿಂಗಪ್ಪ ಅಲ್ಲಿನ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿ, ಸಾರ್ವಜನಿಕರೊಂದಿಗೆ ಮಾತನಾಡಿದರು. ಈ ಕಾಲುಸಂಕವನ್ನು ಅವಲಂಬಿಸಿರುವ ಕುಟುಂಬಗಳ ಮಾಹಿತಿಯೊಂದಿಗೆ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಅಂಗವಿಕಲರು, ವಿಧವೆಯರ ಬಗ್ಗೆ ಪ್ರತ್ಯೇಕ ಮಾಹಿತಿಯನ್ನು ಸಂಗ್ರಹಿಸಿ ಸೋಮವಾರ ಮಧ್ಯಾಹ್ನದೊಳಗೆ ವರದಿ ನೀಡುವಂತೆ ಲಾಯಿಲ ಪಿಡಿಒ ಹಾಗೂ ಗ್ರಾಮಾಡಳಿತಾಧಿಕಾರಿಗೆ ಸೂಚಿಸಿದರು.
ಬೆಳ್ತಂಗಡಿ ಸಬ್‌ಇನ್‌ಸ್ಪೆಕ್ಟರ್ ಆನಂದ, ಬೆಳ್ತಂಗಡಿ ಉಪತಹಸೀಲ್ದಾರ್ ಮಲ್ಲಪ್ಪ ನಡುಗಡ್ಡಿ, ವೇಣೂರು ಹೋಬಳಿ ಕಂದಾಯ ನಿರೀಕ್ಷಕ ಕುಮಾರಸ್ವಾಮಿ, ತಾಲೂಕು ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ ಯಲ್ಲಪ್ಪ ಹಂಗರಗಿ, ಲಾಯಿಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ, ಗ್ರಾಮಾಡಳಿತಾಧಿಕಾರಿ ರನಿತಾ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ, ದಲಿತ ಮುಖಂಡ ಶೇಖರ್ ಲಾಯಿಲ, ಗ್ರಾಮ ಸಹಾಯಕ ಸತೀಶ್ ಹೆಗ್ಡೆ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net