

ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇಲ್ಲಿನ ಬೀಚ್ಗಳಲ್ಲಿ ಜಲಕ್ರೀಡೆ, ಆಯುರ್ವೇದ ಪ್ರವಾಸೋದ್ಯಮ, ಸ್ಥಳೀಯ ಆಹಾರ ಪದ್ಧತಿ, ಪ್ರಾಕೃತಿಕ ಸ್ಥಳಗಳು, ಧಾರ್ಮಿಕ ಸ್ಥಳಗಳ ಕುರಿತಾಗಿ ದೇಶ-ವಿದೇಶದ ಪ್ರವಾಸಿಗರಿಗೆ ಹೆಚ್ಚು ಪ್ರಚಾರ ನೀಡಬೇಕಿದೆ. ಆಯುರ್ವೇದ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ತರಬೇತಿ ಆಯೋಜಿಸಲಾಗುವುದು. ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡಲು ನುರಿತ ಗೈಡ್ಗಳನ್ನೂ ನಿಯೋಜಿಸಲು ಯೋಜಿಸಲಾಗುತ್ತಿದೆ.