

ವಿಜಯವಾಣಿ ಸುದ್ದಿಜಾಲ ಗುರುಪುರ
ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮನಾಭ ಕೋಟ್ಯಾನ್(ಬಿಎಲ್‌ಪಿ) ಸ್ವಾಗತಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಪ್ರಸ್ತಾವಿಕ ಮಾತನ್ನಾಡಿದರು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಡಿಸಿಸಿ ಆಯ್ಕೆ ಪ್ರಕ್ರಿಯೆ ಉಸ್ತುವಾರಿಗಳಾದ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನಲಿಯಾ, ಚಿಕ್ಕಮಗಳೂರು ಜಿಪಂ ಮಾಜಿ ಅಧ್ಯಕ್ಷ ಎಚ್.ಎಂ.ಸತೀಶ್, ಕೆಪಿಸಿಸಿ ಸದಸ್ಯ ಸದಾಶಿವ ಪಿ.ಆರ್., ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಡಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ, ದೇಶದಲ್ಲಿ ಕಾಂಗ್ರೆಸ್ ಬಲವರ್ಧನೆ ವಿಷಯದಲ್ಲಿ ಮಾತನಾಡಿದರು.