ಬೆಳ್ತಂಗಡಿ: ಅಂಬಟೆ ಮರದಿಂದ ಪಕ್ಕದಲ್ಲಿದ್ದ ಕೆರೆಗೆ ಬಿದ್ದು ಶಿರ್ಲಾಲು ಗ್ರಾಮದ ಕೃಷ್ಣಪ್ಪ(23) ಎಂಬುವರು ಮತಪಟ್ಟ ಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ.
ಆ.25ರಂದು ಮನೆ ಸಮೀಪದ ಅಂಬಟೆ ಮರದಿಂದ ಆಕಸ್ಮಿಕವಾಗಿ ಕೆರೆಗೆ ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ 27ರಂದು ಮೃತಪಟ್ಟಿದ್ದಾರೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.