

ಉಡುಪಿ: ವಿದ್ಯಾರ್ಥಿಗಳಲ್ಲಿ ಉತ್ಸಾಹ, ನಿರಂತರ ಅಭ್ಯಾಸ ಹಾಗೂ ಏಕಾಗ್ರತೆಯಿದ್ದರೆ ಏನನ್ನಾದರೂ ಸಾಧಿಸಲು ಸಾಧ್ಯ. ಸೋಲು ಯಾವಾಗಲೂ ನಿರಂತರವಲ್ಲ. ಗೆಲುವಿಗೆ ಅಂತ್ಯ ಎನ್ನುವುದಿಲ್ಲ. ಹೀಗಾಗಿ ಸೋಲು-ಗೆಲುವಿಗೆ ಅಂಜದೆ ಕ್ರೀಡಾ ಮನೋಭಾವದಿಂದ ಪಂದ್ಯಾಟಗಳಲ್ಲಿ ಹುಮ್ಮಸ್ಸಿನಿಂದ ಭಾಗವಹಿಸಬೇಕು ಎಂದು ಎಸ್ವಿಎಸ್ಪಿಯು ಕಾಲೇಜ್ನ ದೈಹಿಕ ಶಿಕ್ಷಣ ಶಿಕ್ಷಕ ಕಿರಣಕುಮಾರ ಶೆಟ್ಟಿ ಸಲಹೆ ನೀಡಿದರು.
ಉಡುಪಿಯ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಶಾಲಾ ಸಂಚಾಲಕ ಕೆ. ಅಣ್ಣಪ್ಪ ಶೆಣೈ ಅಧ್ಯಕ್ಷತೆ ವಹಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಶಿರಾಜ ಕುಂದರ ಅವರು ಕ್ರೀಡಾಕೂಟದ ಉದ್ಘಾಟನೆ ಘೋಷಿಸಿದರು.
ಉಪಾಧ್ಯಕ್ಷ ಸಂತೋಷ ಸಗ್ರಿ, ಕೋಶಾಧಿಕಾರಿ ವೈಷ್ಣವಿ ಕಾಮತ, ಕಾರ್ಯಕಾರಿ ಸಮಿತಿಯ ಸದಸ್ಯೆ ಉಷಾ ರಾವ್, ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಟರಾಜ ಪ್ರಭು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೆ.ವಿನಾಯಕ ಕಿಣಿ, ಪ್ರಾಥಮಿಕ ಶಾಲಾ ಮುಖ್ಯೋಧ್ಯಾಪಕಿ ರೇಷ್ಮಾ ಪ್ರಭು ಉಪಸ್ಥಿತರಿದ್ದರು.
ಮಯೂರ ಎನ್. ಕಾಮತ ಸ್ವಾಗತಿಸಿದರು. ವಿದ್ಯಾರ್ಥಿ ಕ್ರೀಡಾ ಮಂತ್ರಿ ಕೌಶಿಕ ಸಿ. ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು. ಅನೂಷಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಪ್ರಖ್ಯಾತ ಸುವರ್ಣ ವಂದಿಸಿದರು.