ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಕೊರಗರ ಆಗ್ರಹ

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ
Published on
ಉಡುಪಿ: ಕೊರಗ ಸಮುದಾಯದ ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಸುತ್ತಿರುವ ಪ್ರತಿಭಟನೆ 15ನೇ ದಿನಕ್ಕೆ ಕಾಲಿಟ್ಟಿದ್ದು, ಮನವಿ ಆಲಿಸದ ಜಿಲ್ಲಾಡಳಿತ ವಿರುದ್ಧ ಸೋಮವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಸಂದ ಮುಖಂಡ ಕೆ.ಪುತ್ರನ್​ ಮಾತನಾಡಿ, ಯುವ ಜನತೆಗೆ ನೇರ ನೇಮಕಾತಿ ಮೂಲಕ ಉದ್ಯೋಗ ಸಿಗಬೇಕೆಂಬ ಉದ್ದೇಶದಿಂದ 15 ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ನಮ್ಮ ಮನವಿಯನ್ನು ಸ್ವೀಕರಿಸುವ ಸೌಜನ್ಯವನ್ನೂ ಜಿಲ್ಲಾಧಿಕಾರಿ ಪ್ರದರ್ಶಿಸಿಲ್ಲ. ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಬೃಹತ್​ ಪ್ರತಿಭಟನೆ ನಡೆಸಲಾಗುವುದು ಎಂದರು.
ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಕೆ.ರಘುಪತಿ ಭಟ್​ ಉನ್ನತ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕೊರಗರ ಬೇಡಿಕೆ ಬಗ್ಗೆ ಗಮನಸೆಳೆದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್​ ಕುಮಾರ್​ ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿದರು.
ಅಭಿವೃದ್ಧಿ ಸಂದ ಅಧ್ಯೆ ಸುಶೀಲಾ ನಾಡ, ಪ್ರಮುಖರಾದ ಬೊಗ್ರ ಕೊಕ್ಕರ್ಣೆ, ವಿ.ಸಂಜೀವ ಬಾರ್ಕೂರು, ಶೇಖರ ಕೆಂಜೂರು, ದಿವಾಕರ ಕೆಂಜೂರು, ಶಕುಂತಳಾ ನೇಜಾರು, ಭಾರತಿ, ಪ್ರವಿಣ್​ ಹೆಬ್ರಿ, ದೀಪಾ ಮತ್ತಿತರರು ಪ್ರತಿಭಟನೆಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net