ಬೈಂದೂರು, ಕುಂದಾಪುರಕ್ಕೆ ಹಾಸ್ಟೆಲ್ ಬೇಡಿಕೆ

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿ ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿದರು. ಪ್ರಮುಖರಾದ ಹಾಕಪ್ಪ ಲಮಾಣಿ, ನಾರಾಯಣ ಸ್ವಾಮಿ, ರಮೇಶ್ ಮೊದಲಾದವರಿದ್ದರು.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿ ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿದರು. ಪ್ರಮುಖರಾದ ಹಾಕಪ್ಪ ಲಮಾಣಿ, ನಾರಾಯಣ ಸ್ವಾಮಿ, ರಮೇಶ್ ಮೊದಲಾದವರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಬೈಂದೂರು
ಬೈಂದೂರು ಹಾಗೂ ಕುಂದಾಪುರ ಭಾಗದಲ್ಲಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ವಾಡುತ್ತಿರುವ ಜಿಲ್ಲೆಯ ಹಾಗೂ ಹೊರ ರಾಜ್ಯದ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಬೇಡಿಕೆ ಇದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಕುಂದಾಪುರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗ, ಸವಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆಯಡಿ ಕ್ಷೇತ್ರ ವಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.
ಈಗಿರುವ ಹಾಸ್ಟೆಲ್ ಎಲ್ಲ ವಿದ್ಯಾರ್ಥಿಗಳ ಬೇಡಿಕೆಯನ್ನು ಪೂರೈಸದಿರುವ ಕಾರಣ ಕಳೆದ ವರ್ಷ ಬೈಂದೂರು, ಶಂಕರನಾರಾಯಣ, ಹೊಸಂಗಡಿ ಹಾಗೂ ಕುಂದಾಪುರ ಭಾಗದಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್ ಸೇರಿ ಒಟ್ಟು 7 ಹೊಸ ಹಾಸ್ಟೆಲ್‌ಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಅದರಲ್ಲಿ 2 ಹಾಸ್ಟೆಲ್‌ಗಳ ಪ್ರಸ್ತಾವನೆಯನ್ನು ಸರ್ಕಾರ ತಿರಸ್ಕರಿಸಿದೆ ಎಂದು ಶಾಸಕರು ತಿಳಿಸಿದರು.
ಉಳಿದ 5 ಹಾಸ್ಟೆಲ್‌ಗಳಿಗೆ ಸರ್ಕಾರ ಅನುದಾನ ಕೊರತೆ ಕಾರಣ ನೀಡಿ ಬಾಕಿ ಇರಿಸಿದೆ. ಹಾಗಾಗಿ ಈ ವರ್ಷ ಕಳೆದ ಪ್ರಸ್ತಾವನೆಗಳನ್ನೂ ಒಳಗೊಂಡಂತೆ ಕನಿಷ್ಠ 10 ಹೊಸ ಹಾಸ್ಟೆಲ್‌ಗಳ ಮಂಜೂರಾತಿಗಾಗಿ ಸರ್ಕಾರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲು ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಕ್ಷೇತ್ರ ವ್ಯಾಪ್ತಿಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶಾಸಕರು ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಕಪ್ಪ ಲವಾಣಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಅಧಿಕಾರಿ ನಾರಾಯಣ ಸ್ವಾಮಿ, ತಾಲೂಕು ಸವಾಜ ಕಲ್ಯಾಣಾಧಿಕಾರಿ ರಮೇಶ್, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಆಶಾದೇವಿ ಮತ್ತಿತರರು ಉಪಸ್ಥಿತರಿದ್ದರು.

ಕುಂದುಕೊರತೆ ಸಭೆ ಆಯೋಜನೆ

ಪರಿಶಿಷ್ಟ ಜಾತಿ ಹಾಗೂ ಪಂಗಡ ಸಮುದಾಯಗಳು ಅದರಲ್ಲೂ ಮುಖ್ಯವಾಗಿ ಕೊರಗ ಸಮುದಾಯ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದೆ. ಶಿಕ್ಷಣ, ಆರೋಗ್ಯ, ಭೂಮಿಹಕ್ಕು ಮುಂತಾದವುಗಳಲ್ಲಿ ಕೊರತೆ ಅನುಭವಿಸುತ್ತಿದ್ದಾರೆ. ಈ ಸಮುದಾಯಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕುಂದುಕೊರತೆ ಸಭೆಗಳನ್ನು ಆಯೋಜನೆ ವಾಡಲು ಶಾಸಕ ಗಂಟಿಹೊಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ವಾರ್ಡನ್, ಅಡುಗೆ ಸಿಬ್ಬಂದಿಯೊಡನೆ ಮಾತುಕತೆ

ಕ್ಷೇತ್ರ ವ್ಯಾಪ್ತಿಯ 12 ಹಾಸ್ಟೆಲ್ ಮತ್ತು ವಸತಿ ಶಾಲೆಗಳ ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿ ಜತೆ ಮಾತುಕತೆ ನಡೆಸಿದ ಶಾಸಕರು, ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿನ ಮೂಲಸೌಕರ್ಯ ಕೊರತೆ ಹಾಗೂ ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿಚಾರಿಸಿ ಪರಿಹಾರೋಪಾಯ ಕಂಡುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಸಲಹೆ ಸೂಚನೆ ನೀಡಿದರು. ವಾರ್ಡನ್‌ಗಳ ಕೊರತೆ ಬಗ್ಗೆ ಮತ್ತೊಮ್ಮೆ ಸದನದಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.

ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ನಿಲಯ ಮೇಲ್ವಿಚಾರಕರು ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳ ಪ್ರತಿಯೊಂದು ಬೇಕು ಬೇಡಗಳನ್ನು ಅರ್ಥೈಸಿಕೊಳ್ಳುವುದರ ಜತೆ ಶಿಸ್ತಿನ ಹಾಗೂ ಉತ್ತಮ ಕಲಿಕಾ ವಾತಾವರಣ ನಿರ್ವಾಣ ವಾಡುವತ್ತ ಗಮನ ಹರಿಸಬೇಕು.ಸ್ವಚ್ಛ ಪರಿಸರದ ಜತೆಗೆ ಉತ್ತಮ ಗುಣಮಟ್ಟದ ಆಹಾರ ಮಕ್ಕಳಿಗೆ ಪೂರೈಕೆಯಾಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.

— ಗುರುರಾಜ್ ಗಂಟಿಹೊಳೆ, ಶಾಸಕ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net