ಬ್ರಹ್ಮಾವರ ಕೃಷಿ ಕೇಂದ್ರ ಅಧಿಕಾರಿ ಅಮಾನತಿಗೆ ಆಗ್ರಹ

ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದಲ್ಲಿ ಅಕ್ರಮವಾಗಿ ಮರ ಕಡಿದು ಮಾರಾಟ ಮಾಡಿದ ಕುರಿತು ಶನಿವಾರ ಕೃಷಿ ಕೇಂದ್ರಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದಲ್ಲಿ ಅಕ್ರಮವಾಗಿ ಮರ ಕಡಿದು ಮಾರಾಟ ಮಾಡಿದ ಕುರಿತು ಶನಿವಾರ ಕೃಷಿ ಕೇಂದ್ರಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
Published on
ಬ್ರಹ್ಮಾವರ: ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದಲ್ಲಿ ಅಕ್ರಮವಾಗಿ ಮರ ಕಡಿದು ಮಾರಾಟ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಕೃಷಿ ಕೇಂದ್ರಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಮರ ಸಾಗಾಟದ ಪ್ರಕರಣ ದಾಖಲಾಗಿ 20 ದಿನ ಕಳೆದರೂ ಆರೋಪಿಗಳ ವಿರುದ್ಧ ಕ್ರಮ ಆಗಿಲ್ಲ, ಪ್ರಕರಣದಲ್ಲಿ ಭಾಗಿಯಾದ ಹಿರಿಯ ಕ್ಷೇತ್ರ ಅಧೀಕ್ಷಕರ ಮೇಲೆ ಶಿಸ್ತುಕ್ರಮ ಕೈಗೊಂಡು ತಕ್ಷಣ ಅವರನ್ನು ಅಮಾನತ್ತಿನಲ್ಲಿರಿಸಬೇಕು ಎಂದು ಆಗ್ರಹಿಸಿದರು.
ಕೃಷಿಕರ ಅನುಕೂಲಕ್ಕಾಗಿ ಕೃಷಿ ಕೇಂದ್ರದಲ್ಲಿ 400 ಎಕರೆ ಜಾಗ ಇದ್ದರೂ ಈ ತನಕ ಕೃಷಿಕರಿಗೆ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಅಧಿಕಾರಿಗಳು ಸರ್ಕಾರದ ಬೆಲೆಬಾಳುವ ಸ್ವತ್ತುಗಳನ್ನು ದುರ್ಬಳಕೆ ಮಾಡುತಿದ್ದಾರೆ. ಓರ್ವ ಅಧಿಕಾರಿಯಿಂದ ಕೃಷಿಕರಿಗೆ ಅನ್ಯಾಯವಾಗುತ್ತಿದ್ದು ಕೂಡಲೇ ಅವರನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ಕೃಷಿ ಕೇಂದ್ರದ ಗೇಟಿಗೆ ಬೀಗ ಜಡಿದು ಹೋರಾಟ ತೀವ್ರಗೊಳಿಸಲಾಗುವುದು ಎಂದು ಯಶ್‌ಪಾಲ್ ಎಚ್ಚರಿಸಿದರು.
ಅರಣ್ಯ ಇಲಾಖೆ ಅಧಿಕಾರಿ ವಾರಿಜಾಕ್ಷಿ ಮಾತನಾಡಿ ಈಗಾಗಲೇ ತಪ್ಪಿತಸ್ಥರ ಮೇಲೆ ಎಫ್‌ಐಆರ್ ದಾಖಲಿಸಲು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು. ಕೃಷಿ ಕೇಂದ್ರದ ಮುಖ್ಯಸ್ಥ ಡಾ.ಧನಂಜಯ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net