ಟೋಲ್‌ಗೇಟ್ ತೆರವಿಗೆ ಒತ್ತಾಯ

 ಬ್ರಹ್ಮರಕೂಟ್ಲು ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಡೆಸಿದ  ಡಿಸಿ ಕಚೇರಿ ಚಲೋ ಪಾದಯಾತ್ರೆಯಲ್ಲಿ ಅನ್ವರ್ ಸಾದತ್ ಮಾತನಾಡಿದರು.
ಬ್ರಹ್ಮರಕೂಟ್ಲು ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಡೆಸಿದ ಡಿಸಿ ಕಚೇರಿ ಚಲೋ ಪಾದಯಾತ್ರೆಯಲ್ಲಿ ಅನ್ವರ್ ಸಾದತ್ ಮಾತನಾಡಿದರು.
Published on

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಸೋಷಿಯಲ್ ಡೆವಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದಲ್ಲಿ ಮಂಗಳವಾರ ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಿಂದ ಡಿಸಿ ಕಚೇರಿ ಚಲೋ ಪಾದಯಾತ್ರೆ ನಡೆಯಿತು.

ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್, ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರು, ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಅಲ್ಫಾನ್ಸೋ ಪ್ರಾಂಕೋ ಮತ್ತಿತರ ಪ್ರಮುಖರು ಹಾಜರಿದ್ದರು.

ಟೋಲ್‌ಗೇಟ್‌ನಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಹಲವು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ನಿಯಮ ಹಾಗೂ ಅವಧಿಯನ್ನು ಮೀರಿ ಟೋಲ್ ಸಂಗ್ರಹಿಸುತ್ತಿರುವುದನ್ನು ಕೂಡಲೇ ನಿಲ್ಲಿಸಿ ತೆರವುಗೊಳಿಸಬೇಕು ಎಂದು ಆಗ್ರಹಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net