ಮೊದಲ ಕರಡು ಅಧಿಸೂಚನೆಯಲ್ಲಿದ್ದ ಪ್ರದೇಶ ಹಾಗೂ 7ನೇ ಕರಡು ಅಧಿಸೂಚನೆಯಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡದೇ ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಕೊಡಗು, ಹಾಸನ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಬೆಳಗಾವಿ ಜಿಲ್ಲೆಗಳ ಪಶ್ಚಿಮ ಘಟ್ಟ ವ್ಯಾಪ್ತಿಯ 40 ತಾಲೂಕುಗಳು 1576 ಗ್ರಾಮಗಳ ಸಾವಿರಾರು ಕುಟುಂಬಗಳಲ್ಲಿ ಆತಂಕ ಉಂಟಾಗಿದೆ. ಯಥಾ ಸ್ಥಿತಿ ಯೋಜನೆ ಜಾರಿಯಿಂದ ಹಲವು ವರ್ಷಗಳಿಂದ ಈ ಭಾಗದಲ್ಲಿ ಜೀವನ ಕಟ್ಟಿಕೊಂಡು ಬಂದಿರುವ ಕೃಷಿಕರು, ಕೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರ ಬದುಕು ಅತಂತ್ರವಾಗಲಿದೆ. ವಿಶೇಷವಾಗಿ ಕುದುರೆಮುಖ ರಾಷ್ಟ್ರೀಯ ಉದ್ಯಾವನ ವ್ಯಾಪ್ತಿಯಲ್ಲಿರುವ ಮಲೆಕುಡಿಯವರು ಹಾಗೂ ಇತರ ಅರಣ್ಯ ಬುಡಕಟ್ಟುಗಳ ಜನಜೀವನಕ್ಕೆ ಸಮಸ್ಯೆಯಾಗಲಿದೆ. ಜೊತೆಗೆ 2006ರ ಅರಣ್ಯ ಹಕ್ಕು ಕಾಯ್ದೆಗೆ ವರದಿಯಿಂದ ಧಕ್ಕೆಯಾಗಲಿದೆ. ಹೀಗಾಗಿ ಭೌತಿಕ ಸಮೀೆಕ್ಷೆ ಕೈಗೊಳ್ಳಬೇಕು. ಏಕಪಯ ನಿರ್ಧಾರ ಕೈಗೊಳ್ಳಬಾರದು ಎಂದು ಆಗ್ರಹಿಸಿದರು.