

ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆ ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 2026ರ ಜ.12ರಂದು ಕಲ್ಕತ್ತಾದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆ ನಡೆಯಲಿದ್ದು, ವಿದ್ಯಾರ್ಥಿಗಳು 'ಕ್ಯೂರಿಯಸ್' ಎಂಬ ನಾಟಕ ಪ್ರದರ್ಶಿಸಲಿದ್ದಾರೆ. ಮಕ್ಕಳ ಸಾಧನೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಣಿಪಾಲ ಫೌಂಡೇಷನ್ ಪ್ರಾಯೋಜಕತ್ವ ವಹಿಸಿದ್ದು, ಅವರ ಸಹಕಾರಕ್ಕೆ ಕೃತಜ್ಞತರಾಗಿದ್ದೇವೆ.