ಮಹಿಳೆಯರಲ್ಲಿ ನಾಯಕತ್ವ ಗುಣ ವೃದ್ಧಿ

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬ್ರಹ್ಮಾವರ ವಲಯದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದಿಂದ  ಪದಗ್ರಹಣ ಸಮಾರಂಭ ನಡೆಯಿತು. ಬಿರ್ತಿ ರಾಜೇಶ ಶೆಟ್ಟಿ, ಯೋಜನಾ ನಿರ್ದೇಶಕ ನಾಗರಾಜ ಶೆಟ್ಟಿ ಇತರರು ಇದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬ್ರಹ್ಮಾವರ ವಲಯದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಪದಗ್ರಹಣ ಸಮಾರಂಭ ನಡೆಯಿತು. ಬಿರ್ತಿ ರಾಜೇಶ ಶೆಟ್ಟಿ, ಯೋಜನಾ ನಿರ್ದೇಶಕ ನಾಗರಾಜ ಶೆಟ್ಟಿ ಇತರರು ಇದ್ದರು.
Published on
ಬ್ರಹ್ಮಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿಗಳಾಗಿದ್ದು ನಾಯಕತ್ವ ಗುಣವನ್ನು ಬೆಳೆಸಿಕೊಂಡಿದ್ದಾರೆ ಎಂದು ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿರ್ತಿ ರಾಜೇಶ ಶೆಟ್ಟಿ ಹೇಳಿದರು.
ಗುರುವಾರ ಚಾಂತಾರು ಶ್ರೀ ಗದ್ದುಗೆ ಅಮ್ಮನವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬ್ರಹ್ಮಾವರ ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ವತಿಯಿಂದ ತಾಲೂಕಿನ 10 ಒಕ್ಕೂಟಗಳ ಪದಗ್ರಹಣ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನೆ ಬಳಿಕ ಜರುಗಿದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯೋಜನಾ ನಿರ್ದೇಶಕ ನಾಗರಾಜ ಶೆಟ್ಟಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಬ್ರಹ್ಮಾವರ ತಾಲೂಕಿನ ಪ್ರತಿ ಸದಸ್ಯರ ವಾರದ ಉಳಿತಾಯ ಹಣ 22 ಕೋಟಿ ರೂ. ಸದಸ್ಯರ ಬ್ಯಾಂಕ್ ಖಾತೆಯಲ್ಲಿದೆ. ಇದರ ಲಾಭಾಂಶ 4 ಕೋಟಿ ರೂ.ನ್ನು ಸದಸ್ಯರಿಗೆ ನೀಡಲಾಗಿದೆ ಎಂದರು.
ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಲಾಯಿತು. ಮಾಜಿ ಸೇವಾ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ಶೌರ್ಯ ವಿಪತ್ತು ತಂಡದ ಅಧ್ಯಕ್ಷರನ್ನು ಗೌರವಿಸಲಾಯಿತು. ಹೊಸ ಸದಸ್ಯರಿಗೆ ಕೈಪಿಡಿ ನೀಡಲಾಯಿತು.
ಒಕ್ಕೂಟ ಅಧ್ಯಕ್ಷೆ ಆಶಾ ಅಡಿಗ, ಜನಜಾಗೃತಿ ವೇದಿಕೆ ಟ್ರಸ್ಟ್ ಅಧ್ಯಕ್ಷ ರಾಜೀವ ಕುಲಾಲ್, ವಕೀಲ ಬೈಕಾಡಿ ಸುಪ್ರಸಾದ್ ಶೆಟ್ಟಿ, ಸಂತೋಷ ಶೆಟ್ಟಿ ಆರೂರು, ಮುಕುಂದ ನಾಯ್ಕ, ಪ್ರೇಮಾ ಶೆಟ್ಟಿ, ಶಾರದಾ ಪೂಜಾರಿ, ಮಾಲತಿ, ಸುಜಾತಾ, ಸುಧಾ ನಾಯಕ್, ಬೇಬಿ, ಭಾನುಮತಿ, ವಿವಿಧ ಗ್ರಾಪಂ ಅಧ್ಯಕ್ಷರು, ಒಕ್ಕೂಟದ ಪಧಾಧಿಕಾರಿಗಳು ಉಪಸ್ಥಿತರಿದ್ದರು.
ಬ್ರಹ್ಮಾವರ ತಾಲೂಕು ಯೋಜನಾಧಿಕಾರಿ ರಮೇಶ್ ಪಿ. ಸ್ವಾಗತಿಸಿದರು. ಪ್ರವೀಣ ವರದಿ ವಾಚಿಸಿದರು. ಶರತ್ ನಿರೂಪಿಸಿದರು. ಜ್ಯೋತಿ ಆರೂರು ವಂದಿಸಿದರು.
ಚಿತ್ರ:22 ಬಿಎಂ ಆರ್ ಸಂಘ 1-2-3
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬ್ರಹ್ಮಾವರ ವಲಯದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಪದಗ್ರಹಣ ಸಮಾರಂಭ ನಡೆಯಿತು. ಬಿರ್ತಿ ರಾಜೇಶ ಶೆಟ್ಟಿ, ಯೋಜನಾ ನಿರ್ದೇಶಕ ನಾಗರಾಜ ಶೆಟ್ಟಿ ಇತರರು ಇದ್ದರು.
******************************
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net