ಧರ್ಮಸ್ಥಳ ಸೇವಾ ಕಾರ್ಯ ಸಮಾಜಕ್ಕೆ ಮಾದರಿ

ಯಡಾಡಿ ಮದಗ ಕೆರೆಗೆ ಬಾಗಿನ ಅರ್ಪಣೆ ಹಾಗೂ ಹಸ್ತಾಂತರ ಕಾರ್ಯಕ್ರಮವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಪ್ರಮುಖರಾದ ನಾಗರಾಜ್ ಶೆಟ್ಟಿ, ಅರುಣ್ ಕುಮಾರ್ ಹೆಗ್ಡೆ, ಸುಬ್ರಮಣ್ಯ ಶೆಟ್ಟಿ, ಸುಲೇಖಾ ಶೆಟ್ಟಿ ಮತ್ತಿತರರು ಇದ್ದರು.
ಯಡಾಡಿ ಮದಗ ಕೆರೆಗೆ ಬಾಗಿನ ಅರ್ಪಣೆ ಹಾಗೂ ಹಸ್ತಾಂತರ ಕಾರ್ಯಕ್ರಮವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಪ್ರಮುಖರಾದ ನಾಗರಾಜ್ ಶೆಟ್ಟಿ, ಅರುಣ್ ಕುಮಾರ್ ಹೆಗ್ಡೆ, ಸುಬ್ರಮಣ್ಯ ಶೆಟ್ಟಿ, ಸುಲೇಖಾ ಶೆಟ್ಟಿ ಮತ್ತಿತರರು ಇದ್ದರು.
Published on
ಕುಂದಾಪುರ: ಕೆರೆಕಟ್ಟೆಗಳು ಜನರ ಜೀವನಾಡಿ. ನೂರಾರು ವರ್ಷಗಳ ಇತಿಹಾಸವುಳ್ಳ ಕೆರೆಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪುನಶ್ಚೇತನಗೊಳಿಸಿ ಪುಣ್ಯದ ಕೆಲಸ ಮಾಡುತ್ತಿದ್ದು, ಸಮಾಜಕ್ಕೆ ಮಾದರಿಯಾಗಿದೆ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುವಾರ್ ಕೊಡ್ಗಿ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ಸಹಕಾರದೊಂದಿಗೆ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಪುನಶ್ಚೇತನಗೊಳಿಸಲಾದ ಯಡಾಡಿ ಮದಗ ಕೆರೆಯ ಬಾಗಿನ ಅರ್ಪಣೆ ಹಾಗೂ ಹಸ್ತಾಂತರ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಮಾತನಾಡಿದರು. ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಬ್ರಮಣ್ಯ ಶೆಟ್ಟಿ ಶುಭ ಹಾರೈಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಸುಲೇಖಾ ಶೆಟ್ಟಿ ಕೆರೆಗೆ ಬಾಗಿನ ಅರ್ಪಣೆ ಹಾಗೂ ಗ್ರಾಪಂ ವಾಜಿ ಅಧ್ಯಕ್ಷೆ ಜಯಂತಿ ಶೆಟ್ಟಿ ನಾಮಫಲಕ ಅನಾವರಣ ಮಾಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಧುಸೂದನ್, ಉಪವಲಯ ಅರಣ್ಯಾಧಿಕಾರಿ ಮಂಜುನಾಥ ಗಣಪತಿ ನಾಯ್ಕ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಂಕರ ಮೊಗವೀರ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಉದಯ್, ದಿನೇಶ್ ಮೊಗವೀರ, ಗುಂಡು ಶೆಟ್ಟಿ, ದೀಪಾ, ಉದ್ಯಮಿಗಳಾದ ಮಹೇಶ್ ಶೆಣೈ ಗಾವಳಿ, ಕೃಷ್ಣ ಮರಕಾಲ ಯಡಾಡಿ, ಬಿದ್ಕಲ್‌ಕಟ್ಟೆ ವಲಯಾಧ್ಯಕ್ಷ ರಮೇಶ್ ಪೂಜಾರಿ, ವಲಯ ಶೌರ್ಯ ಟಕ ಪ್ರತಿನಿಧಿ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ತಾಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ಪ್ರದೀಪ್ ಕುಮಾರ್ ವಂದಿಸಿದರು. ವಲಯ ಮೇಲ್ವಿಚಾರಕಿ ಶರ್ಮಿಳಾ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net