ಹೆಬ್ರಿಯಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಚ್.ಸೀತಾರಾಮ ಶೆಟ್ಟಿ ಬಾರ್ಕೂರು ಅವರನ್ನು ಗೌರವಿಸಲಾಯಿತು. ಪ್ರಮುಖರಾದ ಗುರುದಾಸ್ ಶೆಣೈ, ಟಿ.ಜಿ.ಪಾಂಡುರಂಗ ಪೈ, ಯೋಗೀಶ್ ಭಟ್ ಮೊದಲಾದವರಿದ್ದರು.
Published on:
Copied
Follow Us
ಹೆಬ್ರಿ: ಭಾರತದ ಕ್ರೀಡಾ ಕ್ಷೇತ್ರದಲ್ಲಿ ಹಾಕಿ ವಾಂತ್ರಿಕ ಮೇಜರ್ ಧ್ಯಾನ್‌ಚಂದ್ ಅವರ ಕೊಡುಗೆ ಅಪಾರವಾದುದು. ಕ್ರೀಡಾ ಕ್ಷೇತ್ರದಲ್ಲಿ ಯುವ ಪೀಳಿಗೆ ಧ್ಯಾನ್‌ಚಂದ್ ಅವರನ್ನು ಸ್ಫೂರ್ತಿ ಮತ್ತು ಆದರ್ಶವಾಗಿ ಸ್ವೀಕರಿಸಬೇಕು ಎಂದು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಚ್.ಸೀತಾರಾಮ ಶೆಟ್ಟಿ ಬಾರ್ಕೂರು ಹೇಳಿದರು.
ಹೆಬ್ರಿ ತಾಲೂಕು ಕ್ರೀಡಾ ಭಾರತಿ ಮತ್ತು ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ವಾತನಾಡಿದರು.
ಕ್ರೀಡಾ ಭಾರತಿ ಗೌರವಾಧ್ಯಕ್ಷ ಗುರುದಾಸ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಅಮೃತ ಭಾರತಿ ವಿದ್ಯಾಲಯದ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ನಿತೀಶ್ ಅವರ ತಾಯಿ ಜ್ಯೋತಿ ಅವರಿಗೆ ಜೀಜಾ ವಾತಾ ಪ್ರಶಸ್ತಿ ಹಾಗೂ ರಾಷ್ಟ್ರ, ರಾಜ್ಯಮಟ್ಟದ ಕ್ರೀಡಾಪಟುಗಳನ್ನು ತರಬೇತುಗೊಳಿಸಿದ ದೈಹಿಕ ಶಿಕ್ಷಣ ನಿರ್ದೇಶಕ ವಿಜಯ್ ಕುವಾರ್ ಶೆಟ್ಟಿ ಅವರಿಗೆ ಅಮೃತ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷ ಟಿ.ಜಿ.ಪಾಂಡುರಂಗ ಪೈ, ಅಮೃತ ಭಾರತಿ ಟ್ರಸ್ಟ್ ವಿಶ್ವಸ್ಥರಾದ ಯೋಗೀಶ್ ಭಟ್, ಸುಧೀರ್ ನಾಯಕ್, ಹಾಸ್ಟೆಲ್ ಕಮಿಟಿ ಸದಸ್ಯರಾದ ರಾಮಕೃಷ್ಣ ಆಚಾರ್ಯ, ಸಂಸ್ಥೆ ಮುಖ್ಯಸ್ಥರಾದ ಪ್ರಕಾಶ್ ಜೋಗಿ, ಅರುಣ್ ಎಚ್.ವೈ., ಅಪರ್ಣಾ ಆಚಾರ್, ಶಕುಂತಲಾ ಉಪಸ್ಥಿತರಿದ್ದರು. ವಿಜಯ್ ಕುವಾರ್ ಶೆಟ್ಟಿ ಸ್ವಾಗತಿಸಿದರು. ಪ್ರವೀಣ್ ಹೆಗ್ಡೆ ಪ್ರಶಸ್ತಿ ಪತ್ರ ವಾಚಿಸಿದರು. ರವೀಂದ್ರ ಶೆಟ್ಟಿ ವಂದಿಸಿದರು. ಮಮತಾ ನಿರೂಪಿಸಿದರು.