ಜಿಲ್ಲೆಯಲ್ಲಿರುವ ಶಾಲಾ – ಅಂಗನವಾಡಿ ಕಟ್ಟಡ ಹಾಗೂ ಕೊಠಡಿಗಳ ಸದೃಢತೆಯ ಬಗ್ಗೆ ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆಗಳ ಅಭಿಯಂತರರು, ಶಿಕ್ಷಣ ಇಲಾಖೆ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ, ಸುರಕ್ಷತೆಯ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಒಂದೊಮ್ಮೆ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ಬಳಕೆಗೆ ಯೋಗ್ಯವಿಲ್ಲದಿದ್ದಲ್ಲಿ ಅಂತಹ ಕೊಠಡಿಗಳಲ್ಲಿ ತರಗತಿಗಳನ್ನು ನಡೆಸದೇ ಬದಲೀ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿದರು. ಸಭೆಯಲ್ಲಿ ಡಿ.ಎಫ್.ಓ ರುಥ್ರೇನ್ ಪಿ, ವೈಲ್ಡ್ಲೈಫ್ ಡಿ.ಎಫ್.ಓ ಶಿವರಾಮ ಎಂ ಬಾಬು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮೀಷನರ್ ರಶ್ಮಿ ಮತ್ತಿತರರು ಉಪಸ್ಥಿತರಿದ್ದರು.