

ಸಂವಿಧಾನ ದಿನಾಚರಣೆ ನ.26ರಂದು ನಡೆಯಲಿದ್ದು ಎಲ್ಲ 224 ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಯುವ ಸಂಸತ್ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಗೆ ಜಿಲ್ಲಾ ಮಟ್ಟದಲ್ಲಿ ನಡೆಯುವ ಚರ್ಚೆಯಲ್ಲಿ ಅತ್ಯುತ್ತಮ ಪ್ರತಿಭೆ ತೋರಿದ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆಮಾಡಿ ರಾಜ್ಯ ಮಟ್ಟದ ಯುವ ಸಂಸತ್ ಸಭೆಗೆ ಕಳುಹಿಸಿಕೊಡಲಾಗುವುದು.