ವಿವಿಧೋದ್ದೇಶ ಸಹಕಾರಿ ಸಂಸ್ಥೆಗಳಾಗಿ ಪರಿವರ್ತನೆ: ಜಯಕರಶೆಟ್ಟಿ

ಜಿಲ್ಲಾ ಮಟ್ಟದ ವಿಶೇಷ ಸಹಕಾರ ತರಬೇತಿ ಶಿಬಿರ ನಡೆಯಿತು.
ಜಿಲ್ಲಾ ಮಟ್ಟದ ವಿಶೇಷ ಸಹಕಾರ ತರಬೇತಿ ಶಿಬಿರ ನಡೆಯಿತು.
Published on
ಉಡುಪಿ: ಸಹಕಾರ ಕ್ಷೇತ್ರ ನಿರಂತರ ಬದಲಾವಣೆಯಾಗುತ್ತಿದ್ದು, ಆರ್ಥಿಕ ವ್ಯವಹಾರದ ಜೊತೆಗೆ ಜನರಿಗೆ ಉಪಯುಕ್ತ ಸೇವೆಗಳನ್ನು ನೀಡಬಹುದಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಹಕಾರ ಸಂಗಳು ವಿವಿಧೋದ್ದೇಶ ಸಹಕಾರ ಸಂಸ್ಥೆಗಳಾಗಿ ಪರಿವರ್ತನೆಯಾಗಲಿವೆ ಎಂದು ಜಿಲ್ಲಾ ಸಹಕಾರಿ ಯೂನಿಯನ್​ ಅಧ್ಯಕ್ಷ ಜಯಕರಶೆಟ್ಟಿ ಇಂದ್ರಾಳಿ ಹೇಳಿದರು.
ಬಡಗಬೆಟ್ಟು ಸೊಸೈಟಿಯಲ್ಲಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರಿ ಯೂನಿಯನ್​ ಹಾಗೂ ಸಹಕಾರ ಇಲಾಖೆ ಸಂಯುಕ್ತಾಶ್ರದಲ್ಲಿ ಜಿಲ್ಲೆಯ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಜಿಲ್ಲಾ ಮಟ್ಟದ ವಿಶೇಷ ಸಹಕಾರ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ಪೆಟ್ರೋಲ್​ ಪಂಪ್​, ಗ್ಯಾಸ್​ ಏಜೆನ್ಸಿ, ವಾಹನ ತರಬೇತಿ ಸಂಸ್ಥೆಗಳನ್ನು ಸಹಕಾರ ಸಂಸ್ಥೆಗಳ ಮೂಲಕ ನಡೆಸಲು ಪರವಾನಿಗೆ ನೀಡುತ್ತಿದೆ. ಸಹಕಾರಿ ಕ್ಷೇತ್ರದಿಂದ ಆರ್ಥಿಕ ವ್ಯವಸ್ಥೆ ಬಲಪಡಿಸಲು ಸಾಧ್ಯ ಎಂಬುದನ್ನು ಆಡಳಿತ ವರ್ಗ ಮನಗಂಡಿದೆ ಎಂದರು.
ಸಹಕಾರ ಮಹಾಮಂಡಳ ವತಿಯಿಂದ ಜಿಲ್ಲೆಯಲ್ಲಿ ಎಲ್ಲಾ ವಗದ ಸಹಕಾರಿಗಳಿಗೆ ನಿರಂತರ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಹಕಾರಿ ಕ್ಷೇತ್ರದಲ್ಲಿ ನಿರಂತರ ಬೆಳವಣಿಗೆಗೆ ತರಬೇತಿ ಅಗತ್ಯವಿದೆ. ವ್ಯವಹಾರದಲ್ಲಿ ನಿತ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಪರಿಹರಿಸಿಕೊಳ್ಳಲು ಸದವಕಾಶ ಇದಾಗಿದೆ. ಸಮಾಜಕ್ಕೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ತರಬೇತಿ ಸಹಕಾರಿಯಾಗಿದೆ ಎಂದು ಹೇಳಿದರು.
ಸಹಕಾರ ಯೂನಿಯನ್​ ನಿರ್ದೇಶಕರಾದ ಗಂಗಾಧರ ಶೆಟ್ಟಿ, ಹರೀಶ್​ ಕಿಣಿ, ಸುಧೀರ್​ ವೈ., ಹಿರಿಯ ಉಪನ್ಯಾಸಕಿ ಬಿಂದು ನಾಯರ್​ ಉಪಸ್ಥಿತರಿದ್ದರು. ಸಿಇಒ ಅನುಷಾ ಕೋಟ್ಯಾನ್​ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net