ಜಿಲ್ಲೆಯ ಖಾಸಗಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳು,ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದೆ. ಈಗಾಗಲೇ ರೈಲ್ವೆ ಹಾಗೂ ಬಸ್ ನಿಲ್ದಾಣ, ಕ್ರೀಡಾ ಸಂಕೀರ್ಣ, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ 4405 ಬೀದಿ ನಾಯಿಗಳಿವೆ. ರೇಬೀಸ್ ಕಾಯಿಲೆ, ಸಂಶಯಾಸ್ಪದ ರೋಗ ಪೀಡಿತ ಅಥವಾ ಆಕ್ರಮಣಕಾರಿ ನಡತೆ ಇರುವ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಬಿಡಲು ಅನುಕೂಲವಾಗುವಂತೆ ಪ್ರತಿ ತಾಲೂಕಿನಲ್ಲಿಯೂ ಆಶ್ರಯ ತಾಣಗಳ ನಿಮಾರ್ಣಕ್ಕೆ ಅಗತ್ಯವಿರುವ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದೆ. ಬಾಕಿ ಉಳಿದಿರುವ ಬ್ರಹ್ಮಾವರ ಮತ್ತು ಹೆಬ್ರಿ ತಾಲೂಕುಗಳಲ್ಲಿಯೂ ವಾರದ ಒಳಗಾಗಿ ಜಾಗ ಗುರುತಿಸಿ, ಎಸ್.ಓ.ಪಿ ಅನ್ವಯ ಅಗತ್ಯವಿರುವ ಆಹಾರ, ನೀರು, ನೆರಳು, ಪಶು ವೈದ್ಯಕಿಯ ಚಿಕಿತ್ಸೆಗಳನ್ನು ಒದಗಿಸುವಂತಹ ಆಶ್ರಯ ತಾಣಗಳನ್ನು ನಿಮಾರ್ಣ ಮಾಡಬೇಕು ಎಂದು ಸೂಚನೆ ನೀಡಿದರು.