ಸೆ.27ಕ್ಕೆ ವಿಭಾಗಮಟ್ಟದ ದಸರಾ ಕ್ರೀಡಾಕೂಟ

(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)
Published on

ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆ

ಉಡುಪಿ: ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.27ರಂದು ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗಿದೆ.

ವಾಲಿಬಾಲ್​, ಕಬಡ್ಡಿ, ಲಾನ್​ ಟೆನ್ನಿಸ್​, ಟೇಬಲ್​ ಟೆನ್ನಿಸ್​, ಕುಸ್ತಿ, ಬಾಕ್ಸಿಂಗ್​ ಮತ್ತು ವುಷು ಸ್ಪರ್ಧೆ ನಡೆಯಲಿದೆ.

ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಉಡುಪಿ ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳು ಆನ್​ಲೈನ್​ ಮೂಲಕ ನೋಂದಣಿ ಮಾಡಿದ ಗುರುತಿನ ಚೀಟಿ ಹಾಗೂ ಇನ್ನಿತರ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.

ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿ ಅಥವಾ ದೂ.ಸಂ. 0820-2521324 ಸಂಪರ್ಕಿಸಬಹುದು ಎಂದು ಇಲಾಖಾಧಿಕಾರಿ ಡಾ. ರೋಶನ್​ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net