ನಾಯಿ ಮಾಲೀಕರಿಗೆ 5 ಸಾವಿರ ರೂ. ದಂಡ

dog
dog
Published on
ಬೆಳ್ತಂಗಡಿ: ಮಹಿಳೆಗೆ ಸಾಕುನಾಯಿ ಕಚ್ಚಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನಾಯಿಯ ಮಾಲೀಕರಿಗೆ 5 ಸಾವಿರ ರೂ. ದಂಡ ವಿಧಿಸಿದೆ.
2025ರ ಡಿ.13ರಂದು ಬೆಳಗ್ಗೆ 9 ಗಂಟೆಗೆ ಕಣಿಯೂರು ಗ್ರಾಮದ ಮೀನಾಕ್ಷಿ ಎಂಬುವರು ಬ್ರಾಂಚ್‌ಗೆ ಬೀಡಿ ಕೊಟ್ಟು ವಾಪಸ್ ಮನೆಗೆ ಬರುತ್ತಿದ್ದಾಗ ಕಣಿಯೂರು ಗ್ರಾಮದ ಕದ್ರಿ-ಗೋವಿಂದನೂರು ಸಾರ್ವಜನಿಕ ರಸ್ತೆಯಲ್ಲಿ ಕಣಿಯೂರು ನಿವಾಸಿ ದೇವದಾಸ್ ಮತ್ತು ರತ್ನಾ ಅವರ ಸಾಕುನಾಯಿ ಕಚ್ಚಿತ್ತು. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮುಖ್ಯ ಆರಕ್ಷಕ ವಿಜು ಅವರು ಬೆಳ್ತಂಗಡಿಯ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಫ್‌ಸಿ ನ್ಯಾಯಾಲಯಕ್ಕೆ ಆರೋಪಿಗಳಾದ ದೇವದಾಸ್ ಮತ್ತು ರತ್ನಾ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದೇವದಾಸ್- ರತ್ನಾ ದಂಪತಿಗೆ ಐದು ಸಾವಿರ ರೂ. ದಂಡ ವಿಧಿಸಿತು.
ದಂಡ ಪಾವತಿಸಲು ವಿಫಲವಾದರೆ ಮೂರು ತಿಂಗಳ ಸಾದಾ ಶಿಕ್ಷೆ ಅನುಭವಿಸಬೇಕು. 5 ಸಾವಿರ ರೂ. ದಂಡದ ಮೊತ್ತವನ್ನು ಸಂತ್ರಸ್ತೆ ಮೀನಾಕ್ಷಿ ಅವರಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿ ತೀರ್ಪು ನೀಡಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net