

ಕುಂದಾಪುರ: ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ವಿಳಂಬವಿಲ್ಲದೆ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಆದರೆ ಆಸ್ಪತ್ರೆಯಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ದಾನಿಗಳ ಸಹಕಾರ ಅಗತ್ಯ ಎಂದು ಕುಂದಾಪುರ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರೇಮಾನಂದ ಹೇಳಿದರು.
ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಜಮೀಯತುಲ್ ಫಲಾಹ್ ಕುಂದಾಪುರ ಘಟಕ ವತಿಯಿಂದ ಮಂಗಳವಾರ ಏರ್ ಕಂಡಿಷನರ್ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಮೀಯತುಲ್ ಫಲಾಹ್ ಕುಂದಾಪುರ ಘಟಕದ ಅಧ್ಯಕ್ಷ ಮುಜಾವರ್ ಅಬು ಮಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಆಸ್ಪತ್ರೆ ವೈದ್ಯಾಧಿಕಾರಿ ಡಾ.ನಾಗೇಶ್, ತಾಲೂಕು ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಶಿವರಾಮ ಪುತ್ರನ್, ಘಟಕದ ನಿಕಟಪೂರ್ವ ಅಧ್ಯಕ್ಷ ಶೇಖ್ ಅಬು ಮಹಮ್ಮದ್, ಜಾಮಿಯಾ ಮಸೀದಿಯ ನಿಕಟ ಪೂರ್ವ ಅಧ್ಯಕ್ಷ ಸೈಯದ್ ನಾಸಿರ್ ಕುಂದಾಪುರ, ಜಮೀಯತುಲ್ ಫಲಾಹ್ ಸದಸ್ಯರು ಉಪಸ್ಥಿತರಿದ್ದರು. ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಾಮ್ ಚಿತ್ತೂರು ಕಾರ್ಯಕ್ರಮ ನಿರ್ವಹಿಸಿದರು.