ವಿದ್ಯಾರ್ಜನೆಗೆ ನೀಡಿದ ಆರ್ಥಿಕ ಸಹಕಾರ ಮರೆಯದಿರಿ

 ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಟ್ರಸ್ಟ್ ಅಧ್ಯಕ್ಷ ಶ್ರೀಧರ ಪೂಜಾರಿ, ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರು ಮೊದಲಾದವರಿದ್ದರು.
ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಟ್ರಸ್ಟ್ ಅಧ್ಯಕ್ಷ ಶ್ರೀಧರ ಪೂಜಾರಿ, ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರು ಮೊದಲಾದವರಿದ್ದರು.
Published on

ಬೆಳ್ತಂಗಡಿ: ಸಮಾಜಮುಖಿಯಾಗಿ ಮಾಡುವ ಸಾಧನೆಗಳು ಸದಾಕಾಲ ನೆನಪಿನಲ್ಲಿ ಉಳಿಯುತ್ತವೆ. ವಿದ್ಯಾರ್ಜನೆಗೆ ನೀಡಿದ ಆರ್ಥಿಕ ಸಹಕಾರವನ್ನು ವಿದ್ಯಾರ್ಥಿಗಳು ಕೊನೆತನಕ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಭಾನುವಾರ ಅಳದಂಗಡಿಯಲ್ಲಿ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಟ್ರಸ್ಟ್ ಅಧ್ಯಕ್ಷ ಶ್ರೀಧರ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಕಾಲದಲ್ಲಿ ಮರಣವನ್ನಪ್ಪಿದ ಪುತ್ರಿಯ ಕೊನೆ ಕೋರಿಕೆಯಂತೆ ಟ್ರಸ್ಟ್ ರಚಿಸಿ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಗಮನವನ್ನು ವಿದ್ಯಾರ್ಜನೆಯತ್ತ ಇರುವಂತೆ ನೋಡಿಕೊಂಡರೆ ಉತ್ತಮ ಉದ್ಯೋಗ, ವೇತನ ಪಡೆಯಬಹುದು ಎಂದರು.
ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರು, ಸುಲ್ಕೇರಿಮೊಗ್ರು ಸಿಎ ಬ್ಯಾಂಕ್ ಅಧ್ಯಕ್ಷ ಸುಧೀರ್ ಸುವರ್ಣ, ಟ್ರಸ್ಟಿ ರೋಶನ್, ಸಭಾಭವನದ ಮಾಲೀಕ ಪ್ರಭಾಕರ ಶೆಟ್ಟಿ ಇದ್ದರು. 65 ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಲಾಯಿತು. ವಿಜಯಕುಮಾರ್ ನಾವರ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net