ಸಹಾಯ ನೀಡಿದ ಸಂಸ್ಥೆಯನ್ನು ಮರೆಯದಿರಿ

 ಕಾರುಣ್ಯೋತ್ಸವದಲ್ಲಿ ಕನ್ನಡ ಮಾಧ್ಯಮ ಶಾಲೆಯ ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ದತ್ತು ಸ್ವೀಕರಿಸಲಾಯಿತು. ಉಳ್ಳಾಲ ಬಂಟರ ಸಂಘದ ಅಧ್ಯಕ್ಷ ರವೀಂದ್ರ ರೈ ಕಲ್ಲಿಮಾರ್, ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಟ್ರಸ್ಟಿ ಚಂದ್ರಶೇಖರ ಶೆಟ್ಟಿ ಮಂಟಮೆ, ಗೌರವ ಸಲಹೆಗಾರ ಆನಂದ ಕೆ.ಅಸೈಗೋಳಿ ಉಪಸ್ಥಿತರಿದ್ದರು.
ಕಾರುಣ್ಯೋತ್ಸವದಲ್ಲಿ ಕನ್ನಡ ಮಾಧ್ಯಮ ಶಾಲೆಯ ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ದತ್ತು ಸ್ವೀಕರಿಸಲಾಯಿತು. ಉಳ್ಳಾಲ ಬಂಟರ ಸಂಘದ ಅಧ್ಯಕ್ಷ ರವೀಂದ್ರ ರೈ ಕಲ್ಲಿಮಾರ್, ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಟ್ರಸ್ಟಿ ಚಂದ್ರಶೇಖರ ಶೆಟ್ಟಿ ಮಂಟಮೆ, ಗೌರವ ಸಲಹೆಗಾರ ಆನಂದ ಕೆ.ಅಸೈಗೋಳಿ ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ವಿದ್ಯೆ, ಸದಾಚಾರ, ಸೇವೆ ಇವು ಭಾರತೀಯ ಸಂಸ್ಕೃತಿಯಲ್ಲಿ ಮುಖ್ಯವಾದ ವಿಚಾರಗಳಾಗಿದ್ದು ನಾವು ಆರಾಧಿಸಿಕೊಂಡು ಬಂದಿದ್ದೇವೆ, ಯಾವ ಸಂಸ್ಥೆ ಶಿಕ್ಷಣ ಹಾಗೂ ಇತರ ಕಾರ್ಯಕ್ಕೆ ಸಹಾಯ ಮಾಡುತ್ತದೆಯೋ ಆ ಸಂಸ್ಥೆಯನ್ನು ಮರೆತುಬಿಡುವುದು ಒಳ್ಳೆಯ ಸಮಾಜದ ಲಕ್ಷಣವಲ್ಲ ಎಂದು ಉಳ್ಳಾಲ ಬಂಟರ ಸಂಘ ಅಧ್ಯಕ್ಷ ರವೀಂದ್ರ ರೈ ಕಲ್ಲಿಮಾರ್ ಅಭಿಪ್ರಾಯಪಟ್ಟರು.
ಅಸೈಗೋಳಿ ಕಾರುಣ್ಯ ಫೌಂಡೇಶನ್ ವತಿಯಿಂದ ಭಾನುವಾರ ಅಸೈಗೋಳಿ ಲಯನ್ಸ್ ಸೇವಾ ಸದನದಲ್ಲಿ ‘ಕಾರುಣ್ಯೋತ್ಸವ-2026’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪತ್ರಕರ್ತ ಮಹಮ್ಮದ್ ಆಸಿಫ್ ಬಬ್ಬುಕಟ್ಟೆ, ನಿವೃತ್ತ ಮುಖ್ಯಶಿಕ್ಷಕ ರಾಧಾಕೃಷ್ಣ ರೈ, ಗಣಿತ ಶಿಕ್ಷಕ ರವಿಶಂಕರ್ ರಾವ್ ಅವರನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳಾದ ಮಹಮ್ಮದ್ ಶಾಕೀರ್, ಆಯಿಶಾ ತಸ್ಫಿಯಾ, ಧನಲಕ್ಷ್ಮೀ ಅವರಿಗೆ ಕಾರುಣ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ 9 ಶಾಲೆಗಳ 35 ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ ಶೈಕ್ಷಣಿಕ ಪರಿಕರ ವಿತರಿಸಲಾಯಿತು.
ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಟ್ರಸ್ಟಿ ಚಂದ್ರಶೇಖರ ಶೆಟ್ಟಿ ಮಂಟಮೆ ಉದ್ಘಾಟಿಸಿದರು. ಗೌರವ ಸಲಹೆಗಾರ ಆನಂದ ಕೆ.ಅಸೈಗೋಳಿ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಸುದೇಶ್ ಕುಮಾರ್, ಉದ್ಯಮಿ ಸುರೇಶ್ ಅಸೈ, ತಾಲೂಕು ಜಮೀಯತುಲ್ ಫಲಾಹ್ ಕೋಶಾಧಿಕಾರಿ ಕೆ.ಕೆ.ಅಬ್ದುಲ್ ನಾಸೀರ್ ನಡುಪದವು, ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಸುಧಾಕರ್ ನಾಯಕ್, ಅಸೈಗೋಳಿ ಮೆರ್ಸಿ ಫ್ರೆಂಡ್ಸ್ ಅಧ್ಯಕ್ಷ ಸಂದೀಪ್ ಡಿಸೋಜ, ಹೈನೋದ್ಯಮಿ ಮೈಮೂನ ಹರೇಕಳ, ಕಾರುಣ್ಯ ಫೌಂಡೇಶನ್ ಉಪಾಧ್ಯಕ್ಷ ಹರೀಶ್ ಕುಮಾರ್, ಸಂ.ಕಾ.ವಿನ್ಸೆಂಟ್ ರೇಗೋ, ಗ್ಲೆನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷ ಅರುಣ್ ಡಿಸೋಜ ವಂದಿಸಿದರು. ಕಾರ್ಯದರ್ಶಿ ರಾಜೀವ ನಾಯಕ್ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net