ಕಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ

ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಯ 24*7 ಅಪಘಾತ ಮತ್ತು ತುರ್ತು ಚಿಕಿತ್ಸಾ ಟಕವನ್ನು ಡಾ.ಜಯಕರ ಶೆಟ್ಟಿ ಉದ್ಘಾಟಿಸಿದರು.
ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಯ 24*7 ಅಪಘಾತ ಮತ್ತು ತುರ್ತು ಚಿಕಿತ್ಸಾ ಟಕವನ್ನು ಡಾ.ಜಯಕರ ಶೆಟ್ಟಿ ಉದ್ಘಾಟಿಸಿದರು.
Published on
ಕುಂದಾಪುರ: ಆರೋಗ್ಯ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ತುರ್ತು ಪರಿಸ್ಥಿತಿಗಳು ತುಂಬಾ ನಿರ್ಣಾಯವಾಗಿದೆ. ಜನರು ಆರೋಗ್ಯ ಸಂಬಂಧಿ ಕಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ ಶೆಟ್ಟಿ ಹೇಳಿದರು.
ಕುಂದಾಪುರದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಯ 24*7 ಅಪಘಾತ ಮತ್ತು ತುರ್ತು ಚಿಕಿತ್ಸಾ ಟಕವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್ ಮಾತನಾಡಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಧೈರ್ಯವಾಗಿ ತೆರಳಿ ಚಿಕಿತ್ಸೆ ಪಡೆಯುವಂತಾಗಿದೆ. ತುರ್ತು ಚಿಕಿತ್ಸೆ ಬಗ್ಗೆ ನಾವು ಯಾರೂ ಈ ವಿಚಾರದಲ್ಲಿ ಅನುಭವಿಗಳಲ್ಲ. ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆ ಬಗ್ಗೆ ವೈದ್ಯರಿಗೆ ಬಿಡಬೇಕು. ಅಪಘಾತದ ಸಂದರ್ಭ ಗಾಯಾಳುಗಳಿಗೆ ನೀಡಬಹುದಾದ ತುರ್ತು ಚಿಕಿತ್ಸೆ ಹಾಗೂ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಪೊಲೀಸ್ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದರು.
ರಸ್ತೆ ಸುರಕ್ಷತಾ ದೃಷ್ಟಿಯಿಂದ ಕುಂದಾಪುರ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಹಸ್ತಾಂತರಿಸಲಾಯಿತು. ಯೂನಿಯನ್ ಬ್ಯಾಂಕ್‌ನ ಉಡುಪಿ ವಿಭಾಗದ ಡೆಪ್ಯುಟಿ ರೀಜಿನ್ ಹೆಡ್ ಸತ್ಯಭ್ರತೋ ಭಾದುರಿ, ಮಂಗಳೂರು ಕೆಎಂಸಿ ಆಸ್ಪತ್ರೆ ತುರ್ತು ವೈದ್ಯಕೀಯ ವಿಭಾಗದ ಕ್ಲಸ್ಟರ್ ಮುಖ್ಯಸ್ಥ ಡಾ.ಜೀಧು ರಾಧಾಕೃಷ್ಣನ್, ಮಾರ್ಕೆಟಿಂಗ್ ವಿಭಾಗದ ಸೀನಿಯರ್ ವ್ಯಾನೇಜರ್ ರಾಕೇಶ್, ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ, ಕುಂದಾಪುರ ಐಎಂಎ ಅಧ್ಯಕ್ಷ ಡಾ.ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪುರ ನ್ಯೂ ಮೆಡಿಕಲ್ ಸೆಂಟರ್‌ನ ನಿರ್ದೇಶಕ ಡಾ.ರಂಜನ್ ಶೆಟ್ಟಿ ಪ್ರಾಸ್ತಾವಿಸಿ, ಸ್ವಾಗತಿಸಿದರು. ಡಾ.ಪ್ರಕೃತಿ ವಂದಿಸಿದರು. ಪತ್ರಕರ್ತ ಕೆ.ಸಿ.ರಾಜೇಶ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net