ನಾರಾವಿ ದೇವಳಕ್ಕೆ ಡಾ.ಹೆಗ್ಗಡೆ ಭೇಟಿ

 ನಾರಾವಿ ಶ್ರೀ ಸೂರ್ಯನಾರಾಯಣ ದೇವಳಕ್ಕೆ ಡಾ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು ಮೊದಲಾದವರಿದ್ದರು.
ನಾರಾವಿ ಶ್ರೀ ಸೂರ್ಯನಾರಾಯಣ ದೇವಳಕ್ಕೆ ಡಾ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು ಮೊದಲಾದವರಿದ್ದರು.
Published on
ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ನಡೆಯುತ್ತಿರುವ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಡಾ.ಹೆಗ್ಗಡೆ ಅವರನ್ನು ನಾರಾವಿ ಕ್ಷೇತ್ರದ ವತಿಯಿಂದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು ಗೌರವಿಸಿದರು. ಲಾವಣ್ಯ ಬಳ್ಳಾಲ್, ಎ.ವೀರು ಶೆಟ್ಟಿ ಧರ್ಮಸ್ಥಳ, ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರಾದ ಮಹಾವೀರ್ ಜೈನ್, ವಿನಯ್ ಹೆಗ್ಡೆ, ಎನ್.ಶ್ರೀನಿವಾಸ್ ಕಿಣಿ, ಜಗದೀಶ್ ಅಂಚನ್, ಉದ್ಯಮಿ ವಸಂತ ಭಟ್, ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಗದೀಶ್ ಹೆಗ್ಡೆ, ಎನ್.ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋದಾ, ರಶ್ಮಿ, ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಅಶೋಕ್, ಮೇಲ್ವಿಚಾರಕಿ ವಿಶಾಲ, ವಿವಿಧ ಸಮಿತಿಯ ಪ್ರಮುಖರು, ಭಕ್ತರು ಉಪಸ್ಥಿತರಿದ್ದರು.
ಬೆಳಗ್ಗೆ 10.44ರ ವೃಷಭ ಲಗ್ನ ಸುಮುಹೂರ್ತದಲ್ಲಿ ಎಡಪದವು ರಾಧಾಕೃಷ್ಣ ತಂತ್ರಿ ಅವರಿಂದ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net