ಡಾ. ಜಿ.ಶಂಕರ್ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ನಿಕೇತನಾ ನೇಮಕ
ಡಾ.ನಿಕೇತನಾ.
Published on:
Copied
Follow Us
* ಪ್ರೊ. ಸೋಜನ್ ಕೆ.ಜಿ. ಅವರಿಂದ ಪ್ರಭಾರ ಸ್ವೀಕಾರ
ಉಡುಪಿ: ಅಜ್ಜರಕಾಡುನಲ್ಲಿರುವ ಡಾ. ಜಿ.ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾಗಿ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನಾ ಅಧಿಕಾರ ಸ್ವೀಕರಿಸಿದರು.
ನಿಕಟಪೂರ್ವ ಪ್ರಾಂಶುಪಾಲ ಪ್ರೊ. ಸೋಜನ್ ಕೆ.ಜಿ. ಅವರಿಂದ ಪ್ರಭಾರ ಸ್ವೀಕಾರ ಮಾಡಿದರು. ಕಾಲೇಜಿನ ವಿವಿಧ ವಿಭಾಗಗಳ ಅಧ್ಯಾಪಕರು ಉಪಸ್ಥಿತರಿದ್ದರು.
ಡಾ.ನಿಕೇತನಾ ಅವರು ಲೇಖಕಿ ಮತ್ತು ಚಿಂತಕಿಯಾಗಿ ಪರಿಚಿತರಾಗಿದ್ದಾರೆ. ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ನ ಪುರಸ್ಕಾರದೊಂದಿಗೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಮತ್ತು ಹಿರಿಯಡ್ಕದಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು.