ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ಕಾರು ನದಿಗೆ ಬಿದ್ದಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ್ದಾರೆ.
ಮೀನುಗಾರ ಗಣೇಶ್ ಚೆನ್ನಂಗಡಿಕಾರು ನದಿಗೆ ಬಿದ್ದಿರುವುದನ್ನು ಗಮನಿಸಿ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿದ್ದರು. ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ನೀರಿನ ಸೆಳೆತದ ನಡುವೆಯೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ ಇಬ್ಬರ ಜೀವ ಉಳಿಸಿದ ಗಣೇಶ್ ಅವರ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಸ್ಥಳಿಯರು ವ್ಯಾಪಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.