ಮಾದಕ ವಸ್ತು ಸೇವನೆಯಿಂದ ನೆಮ್ಮದಿ ಹಾಳು

ಕುಂದಾಪುರದ ಭಂಡಾಕಾರ್ಸ್ ಕಾಲೇಜಿನಲ್ಲಿ ಸೈಬರ್ ಅಪರಾಧಗಳು ಹಾಗೂ ಮಾದಕ ವಸ್ತುಗಳ ವ್ಯಸನ ಮತ್ತು ಯುವಕರು ಎಂಬ ವಿಷಯದ ಕುರಿತು ಕಾರ್ಯಕ್ರಮ ನಡೆಯಿತು.
ಕುಂದಾಪುರದ ಭಂಡಾಕಾರ್ಸ್ ಕಾಲೇಜಿನಲ್ಲಿ ಸೈಬರ್ ಅಪರಾಧಗಳು ಹಾಗೂ ಮಾದಕ ವಸ್ತುಗಳ ವ್ಯಸನ ಮತ್ತು ಯುವಕರು ಎಂಬ ವಿಷಯದ ಕುರಿತು ಕಾರ್ಯಕ್ರಮ ನಡೆಯಿತು.
Published on: 

ಕುಂದಾಪುರ: ಭಾರತದಲ್ಲಿ ಇತ್ತೀಚೆಗೆ ವಾದಕ ವಸ್ತುಗಳ ವ್ಯಸನ ಹೆಚ್ಚಾಗುತ್ತಿರುವುದು ವಿಷಾದಕರ ಸಂಗತಿ. ಭಾರತದಲ್ಲಿ ಪ್ರತಿ ದಿನ 10 ಜನರು ಇದರಿಂದ ಸಾಯುತ್ತಿದ್ದಾರೆ. ಮಾದಕ ವಸ್ತುಗಳು ಮತ್ತು ಅವುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಪರಿಣಾಮ ಆಗುವುದಲ್ಲದೆ, ಎಂ.ಡಿ.ಪಿ.ಎಸ್ ಕಾಯ್ದೆಯಡಿ ಮಾದಕ ವಸ್ತುಗಳ ವ್ಯಸನಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕುಂದಾಪುರ ಪೊಲೀಸ್ ಠಾಣೆ ಉಪನಿರೀಕ್ಷಕ ನಂಜಾ ನಾಯ್ಕ ಹೇಳಿದರು.

ಕುಂದಾಪುರ ಭಂಡಾಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆ್ಯಂಟಿ ಡ್ರಗ್ಸ್ ಅವೇರ್ನೆಸ್ ಸೆಲ್ ಆಶ್ರಯದಲ್ಲಿ ಕಾಲೇಜಿನಲ್ಲಿ ‘ಸೈಬರ್ ಅಪರಾಧಗಳ ಇತ್ತೀಚೆಗಿನ ಪ್ರವೃತ್ತಿಗಳು ಹಾಗೂ ಮಾದಕ ವಸ್ತುಗಳ ವ್ಯಸನ ಮತ್ತು ಯುವಕರು’ ವಿಷಯದ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೈಬರ್ ಅಪರಾಧಗಳ ಕುರಿತು ಉಡುಪಿ ಸೈಬರ್ ಅಪರಾಧ ವಿಭಾಗದ ಪವನ್ ಕುಮಾರ್ ಮಾಹಿತಿ ನೀಡಿದರು. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಾಕರಾಚರಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಉಪಸ್ಥಿತರಿದ್ದರು. ಅರುಣ್ ಎಸ್.ಎಂ. ನಿರೂಪಿಸಿದರು. ರಾಮಚಂದ್ರ ಆಚಾರ್ಯ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net