ಆಯುರ್ವೇದ ಸಂಶೋಧನೆಯಿಂದ ಆರ್ಥಿಕ ಬೆಳವಣಿಗೆ

ಅಲೋಕ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಅಳ್ವ ಅವರನ್ನು ಸನ್ಮಾನಿಸಲಾಯಿತು. ಡಾ.ಲಕ್ಷ್ಮೀ ನಾರಾಯಣ ಶೆಣೈ, ಡಾ.ಸುಶೀಲ್ ಶೆಟ್ಟಿ, ಪ್ರೊ.ಶ್ರೀನಾಥ್ ರಾಮ್ಪೂರೆ ಇದ್ದರು.
ಅಲೋಕ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಅಳ್ವ ಅವರನ್ನು ಸನ್ಮಾನಿಸಲಾಯಿತು. ಡಾ.ಲಕ್ಷ್ಮೀ ನಾರಾಯಣ ಶೆಣೈ, ಡಾ.ಸುಶೀಲ್ ಶೆಟ್ಟಿ, ಪ್ರೊ.ಶ್ರೀನಾಥ್ ರಾಮ್ಪೂರೆ ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಆಯುರ್ವೇದದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ, ಸಮಾಜಕ್ಕೆ ಉಪಯೋಗವಾಗುವ ಹಾಗೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡಬೇಕು ಎಂದು ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀ ನಾರಾಯಣ ಶೆಣೈ ಹೇಳಿದರು.
ಆಳ್ವಾಸ್ ಆಯುರ್ವೇದ ಕಾಲೇಜಿನ ಆತ್ಮ ಸಂಶೋಧನಾ ಕೇಂದ್ರ, ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅಲೋಕ 2026ಉದ್ಘಾಟಿಸಿ ಮಾತನಾಡಿದರು.
ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಯುರ್ವೇದ ಕ್ಷೇತ್ರದ ಸಂಶೋಧನೆಗಳನ್ನು ದಾಖಲೆಗಳ ಮೂಲಕ ವಿಶ್ವಕ್ಕೆ ಪರಿಚಯಿಸಿ, ಅವುಗಳನ್ನು ವ್ಯಾಪಾರ ಕ್ಷೇತ್ರಕ್ಕೂ ತಲುಪಿಸಬೇಕಾಗಿದೆ. ಕೇಂದ್ರ ಸರ್ಕಾರ ಈ ವರ್ಷದ ಬಜೆಟ್‌ನಲ್ಲಿ ಆಯುರ್ವೇದಕ್ಕೆ 4000 ಕೋಟಿ ರೂ.ಗೂ ಅಧಿಕ ಅನುದಾನವನ್ನು ಘೋಷಿಸಿರುವುದು ಆಯುರ್ವೇದ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ವತಿಯಿಂದ ಡಾ.ಎಂ.ಮೋಹನ ಆಳ್ವ ಅವರನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ನಂತರದ ಅಧಿವೇಶನಗಳನ್ನು ನಡೆಸಿಕೊಟ್ಟರು.
ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಸುಶೀಲ್ ಶೆಟ್ಟಿ, ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನ ಮುಖ್ಯಸ್ಥ ಪ್ರೊ.ಶ್ರೀನಾಥ್ ರಾಮ್ಪೂರೆ, ಆತ್ಮ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಸುಬ್ರಮಣ್ಯ ಪದ್ಯಾಣ ಸ್ನಾತಕೋತ್ತರ ವಿಭಾಗದ ಡೀನ್ ಮಂಜುನಾಥ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಡಾ.ಗೀತಾ ಮಾರ್ಕಂಡೇಯ ನಿರೂಪಿಸಿ, ಡಾ.ಸುಮಂತ ಶೆಣೈ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net