

ಎಡಮಂಗಲ ಗ್ರಾಮವನ್ನು ಕಡಬ ಠಾಣೆ ವ್ಯಾಪ್ತಿಗೆ ಸೇರಿಸಬೇಕೆಂಬ ಬೇಡಿಕೆ ಗ್ರಾಮಭೆೆಯಲ್ಲಿ ಪ್ರಸ್ತಾಪವಾಗಿತ್ತು. ಈ ಹಿನ್ನಲೆಯಲ್ಲಿ ಗ್ರಾಮಸಭೆೆಯಲ್ಲಿ ನಿರ್ಣಯ ಕೈಗೊಂಡು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಪತ್ರ ಬರೆಯಲಾಗಿದೆ. ಅಲ್ಲಿಂದ ಪ್ರತಿಕ್ರಿಯೆ ಬಂದ ಬಳಿಕ ಮುಂದಿನ ಕ್ರಮ ವಹಿಸಲಾಗುವುದು.
ಎಡಮಂಗಲ ಗ್ರಾಮವನ್ನು ಬೆಳ್ಳಾರೆ ಠಾಣೆಯಿಂದ ಬೇರ್ಪಡಿಸಿ ಹತ್ತಿರದ ಕಡಬ ಠಾಣೆಗೆ ಸೇರ್ಪಡೆಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಗೃಹ ಸಚಿವರಿಗೆ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಲಾಗಿದೆ.