

ಕಾಸರಗೋಡು: ಎಂಬಿಬಿಎಸ್ ತರಗತಿ ಹೊಸ ಬ್ಯಾಚ್‌ನ ಪ್ರವೇಶಕ್ಕೆ ಅನುಮೋದನೆ ದೊರೆತಿರುವ ಹಿನ್ನೆಲೆ, ಶೈಕ್ಷಣಿಕ ಕಟ್ಟಡದ ನಿರ್ಮಾಣ ಕಾರ್ಯ ಅಕ್ಟೋಬರ್ ವೇಳೆಗೆ ಹಾಗೂ ಆಸ್ಪತ್ರೆ ಕಟ್ಟಡದ ನಿರ್ಮಾಣ ಕಾಮಗಾರಿ 2027 ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ನಿರ್ಧರಿಸಿದ್ದು, ನಿರ್ಮಾಣ ಕಾರ್ಯ ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಾಜಿ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಎ.ಕೆ.ಎಂ.ಅಶ್ರಫ್, ಕಾಸರಗೋಡು ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಅಬ್ದುಲ್ಲಕುಞಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಶೈಕ್ಷಣಿಕ ಕಟ್ಟಡ, ಆಸ್ಪತ್ರೆ ಕಟ್ಟಡ, ವಸತಿ ನಿಲಯ ಮತ್ತು ಸಂಬಂಧಿತ ಸೌಲಭ್ಯಗಳ ಕಾಮಗಾರಿ ನಿಗದಿತ ಸಮಯದೊಳಗೆ ಪೂರ್ಣಗೊಳಿಬೇಕು. ಬಾಲಕಿಯರ ವಸತಿ ನಿಲಯದ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಅನುದಾನ ಬಿಡುಗಡೆಗೊಳಿಸಿ, ಕಾಮಗಾರಿಗೆ ಅನುಮೋದನೆ ನೀಡಲಾಗುವುದು.
— ಅರ್ಜುನ್ ಪಾಂಡಿಯನ್, ಜಿಲ್ಲಾಧಿಕಾರಿ