ಕುಂದಾಪುರದ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಮುಖರಾದ ಚಂದ್ರ ನಾಯ್ಕ, ಸುಮಾ ಉಮೇಶ್ ಪುತ್ರನ್, ಕೆ.ರಾಮಕೃಷ್ಣ ಕಾಮತ್, ಕೆ.ರಾಧಾಕೃಷ್ಣ ಶೆಣೈ, ಕೆ.ಲಕ್ಷ್ಮೀನಾರಾಯಣ ಶೆಣೈ, ಸುಜಯ್ ಕೋಟೆಗಾರ ಉಪಸ್ಥಿತರಿದ್ದರು.
ಕುಂದಾಪುರ: ಕುಂದಾಪುರದ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳ 40ನೇ ಸಂಸ್ಥಾಪನಾ ದಿನಾಚರಣೆ ಮಂಗಳವಾರ ಶಾಲಾ ಸಭಾಂಗಣದಲ್ಲಿ ಜರುಗಿತು.
ಕುಂದಾಪುರ ಮತ್ತು ಬೈಂದೂರು ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರ ನಾಯ್ಕ ಹಾಗೂ ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಸುಮಾ ಉಮೇಶ್ ಪುತ್ರನ್ ಶುಭಾಶಂಸನೆಗೈದರು. ಸಂಸ್ಥೆ ಅಧ್ಯಕ್ಷ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಹಾಗೂ ಖಜಾಂಚಿ ಕೆ.ಲಕ್ಷ್ಮೀನಾರಾಯಣ ಶೆಣೈ ಶುಭ ಹಾರೈಸಿದರು. ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಸುಜಯ್ ಕೋಟೆಗಾರ ಉಪಸ್ಥಿತರಿದ್ದರು.
ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರನ್ನು ಸನ್ಮಾನಿಸಿ ಬೆಳ್ಳೆಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. 600ಕ್ಕಿಂತ ಅಧಿಕ ಅಂಕ ಪಡೆದ 60 ವಿದ್ಯಾರ್ಥಿಗಳಿಗೆ 10 ಗ್ರಾಂ ಬೆಳ್ಳಿಯ ನಾಣ್ಯ ಹಾಗೂ ಡಿಸ್ಟಿಂಕ್ಷನ್ ಪಡೆದ 129 ವಿದ್ಯಾರ್ಥಿಗಳಿಗೆ 8 ಗ್ರಾಂ ಬೆಳ್ಳಿಯ ನಾಣ್ಯವನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಪಿಯುಸಿ ಸಾಧಕರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸುಮಾರು 222 ಬೋಧಕ, ಬೋಧಕೇತರ ಸಿಬ್ಬಂದಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ ಸ್ವಾಗತಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ವಂದಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ ಅತಿಥಿಗಳನ್ನು ಪರಿಚಯಿಸಿದರು. ಸಹಶಿಕ್ಷಕಿ ಭಾವನಾ ಪಿ. ಕಾರ್ಯಕ್ರಮ ನಿರೂಪಿಸಿದರು.