ಆಡಳಿತವನ್ನು ಗ್ರಾಮಮಟ್ಟಕ್ಕೆ ತರುವ ಪ್ರಯತ್ನ

ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬೈಂದೂರು ಉತ್ಸವದ ಪ್ರಯುಕ್ತ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಗುರುರಾಜ ಗಂಟಿಹೊಳೆ ವಾತನಾಡಿದರು. ಬೈಂದೂರು ತಹಸೀಲ್ದಾರ್ ರಾಮಚಂದ್ರಪ್ಪ, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಇತರರಿದ್ದರು.
ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬೈಂದೂರು ಉತ್ಸವದ ಪ್ರಯುಕ್ತ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಗುರುರಾಜ ಗಂಟಿಹೊಳೆ ವಾತನಾಡಿದರು. ಬೈಂದೂರು ತಹಸೀಲ್ದಾರ್ ರಾಮಚಂದ್ರಪ್ಪ, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಇತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಬೈಂದೂರು
ಕಳೆದ ವರ್ಷ ಬೈಂದೂರು ಉತ್ಸವ ಆಯೋಜಿಸಿ ಕ್ಷೇತ್ರದ ಪ್ರವಾಸಿ ತಾಣ, ಆರಾಧನಾ ಕೇಂದ್ರಗಳನ್ನು ಪರಿಚಯಿಸಲಾಗಿತ್ತು. ಈ ಬಾರಿ ಆಡಳಿತ ವ್ಯವಸ್ಥೆಯನ್ನೇ ಗ್ರಾಮದ ಬಳಿಗೆ ಕರೆತಂದು ವಿವಿಧ ಇಲಾಖೆಗಳ ಯೋಜನೆ, ಸವಲತ್ತುಗಳ ಬಗ್ಗೆ ವಾಹಿತಿ ನೀಡುವ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮೋತ್ಸವ ಎಂಬ ವಿನೂತನ ಕಾರ್ಯಕ್ರಮ ನಡೆಸುತ್ತಿದ್ದೇವೆ. ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇಲಾಖೆಗಳು ಕೂಡ ಉತ್ತಮ ರೀತಿಯಲ್ಲಿ ಸಹಕಾರ ನೀಡಿದ್ದಾರೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬೈಂದೂರು ಉತ್ಸವದ ಪ್ರಯುಕ್ತ ನಡೆದ ಅಧಿಕಾರಿಗಳ ಸಭೆಯಲ್ಲಿ ವಾತನಾಡಿದರು.
ಬೈಂದೂರು ಉತ್ಸವ ಕೇವಲ ಮನರಂಜನೆಗಾಗಿ ಅಲ್ಲ. ಮಹಿಳೆಯರನ್ನು ಮುಖ್ಯವಾಹಿನಿಗೆ ತರುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ ಸ್ವಉದ್ಯಮದ ಮೂಲಕ ಆರ್ಥಿಕವಾಗಿ ಸಬಲರಾಗಿಸುವ ಉದ್ದೇಶ ಹೊಂದಲಾಗಿದೆ. ಕೃಷಿ, ತೋಟಗಾರಿಕೆ, ಅರಣ್ಯ, ಪಶು ಸಂಗೋಪನೆ, ಶಿಕ್ಷಣ, ಬ್ಯಾಂಕಿಂಗ್ ಮೊದಲಾದವುಗಳ ಬಗ್ಗೆ ವಾಹಿತಿ ನೀಡಿ ಸವಲತ್ತುಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮ ಸಂಟಿಸಲಾಗುತ್ತಿದೆ ಎಂದರು.
25ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ತಾಲೂಕಿನ ಮೀನುಗಾರರ ಸಹಕಾರಿ ಸಂಗಳ ಅಧ್ಯಕ್ಷರು, ಸಂಘ-ಸಂಸ್ಥೆಗಳ ಪ್ರಮುಖರು ಸಲಹೆ, ಸೂಚನೆ ನೀಡಿದರು.
ಬೈಂದೂರು ತಹಸೀಲ್ದಾರ್ ರಾಮಚಂದ್ರಪ್ಪ, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಕುಂದಾಪುರ ತಾಪಂ ಇಒ ಮಹೇಶ ಕೆ.ಜಿ., ಬೈಂದೂರು ತಾಪಂ ಇಒ ರಾಮದಾಸ್, ಮೀನುಗಾರಿಕಾ ಇಲಾಖೆ ಜಿಲ್ಲಾ ನಿರ್ದೇಶಕ ಕುವಾರಸ್ವಾಮಿ, ಉತ್ಸವದ ಸಂಚಾಲಕ ಶ್ರೀಗಣೇಶ ಗಾಣಿಗ ಉಪ್ಪುಂದ ಉಪಸ್ಥಿತರಿದ್ದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಕಾರ್ಯಕ್ರಮ ನಿರ್ವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net