ಬೆಳಪು ಅಧ್ಯಯನ ಕೇಂದ್ರ ಅನುಷ್ಠಾನಕ್ಕೆ ಪ್ರಯತ್ನ

 ಕರ್ನಾಟಕ ವಿಧಾನಮಂಡಲ ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಸದಸ್ಯ ಟಿ.ಎ.ಶರವಣ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಂಜುನಾಥ ಭಂಡಾರಿ ಬೆಳಪು ವಿಜ್ಞಾನ ಕೇಂದ್ರ ಪ್ರದೇಶಕ್ಕೆ ಭೇಟಿ ನೀಡಿದರು. ಪ್ರಮುಖರಾದ ದೇವಿಪ್ರಸಾದ್ ಶೆಟ್ಟಿ, ವಿಜಯಕುಮಾರ್, ಪ್ರವೀಣ್ ಡಿಸೋಜ ಮತ್ತಿತರರಿದ್ದರು.
ಕರ್ನಾಟಕ ವಿಧಾನಮಂಡಲ ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಸದಸ್ಯ ಟಿ.ಎ.ಶರವಣ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಂಜುನಾಥ ಭಂಡಾರಿ ಬೆಳಪು ವಿಜ್ಞಾನ ಕೇಂದ್ರ ಪ್ರದೇಶಕ್ಕೆ ಭೇಟಿ ನೀಡಿದರು. ಪ್ರಮುಖರಾದ ದೇವಿಪ್ರಸಾದ್ ಶೆಟ್ಟಿ, ವಿಜಯಕುಮಾರ್, ಪ್ರವೀಣ್ ಡಿಸೋಜ ಮತ್ತಿತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಬೆಳಪು ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಪೂರ್ಣವಾಗಿ ಜನರ ತೆರಿಗೆ ಹಣ ಪೋಲಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಯಾವ ಕಾರಣದಿಂದ ಇದು ಪ್ರಗತಿ ಕಂಡಿಲ್ಲ. ಗ್ರಾಮೀಣ ಜನರಿಗೆ ಇದರ ಫಲ ಸಿಗುತ್ತಿಲ್ಲ ಎನ್ನುವುದರ ಬಗ್ಗೆ ಸಮಗ್ರ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಗುವುದು. ಯೋಜನೆ ಅನುಷ್ಠಾನ ಕುರಿತಂತೆ ಪ್ರಯತ್ನಗಳನ್ನು ಸಮಿತಿಯಿಂದ ಮಾಡಲಾಗುವುದು ಎಂದು ಕರ್ನಾಟಕ ವಿಧಾನಮಂಡಲ ಅಧೀನ ಶಾಸನ ರಚನಾ ಸಮಿತಿ ಸದಸ್ಯ ಟಿ.ಎ.ಶರವಣ ತಿಳಿಸಿದರು.
ಬೆಳಪು ಗ್ರಾಮ ಪಂಚಾಯಿತಿ ಹಾಗೂ ನನೆಗುದಿಗೆ ಬಿದ್ದಿರುವ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಮತ್ತು ಸ್ನಾತಕೊತ್ತರ ಅಧ್ಯಯನ ಕೇಂದ್ರ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಈಗಾಗಲೇ ಮಂಗಳೂರು ವಿವಿ ಉಪಕುಲಪತಿಯೊಡನೆ ಮಾತುಕತೆ ನಡೆಸಿದ್ದು, ಈಗಾಗಲೇ 50 ಕೋಟಿ ರೂ. ಖರ್ಚು ವಾಡಲಾಗಿದೆ. ಇನ್ನು 70 ಕೋಟಿ ರೂ. ಖರ್ಚು ಮಾಡಿದರೆ ಏನನ್ನು ವಾಡಬಹುದು ಎಂಬುದನ್ನು ತಿಳಿದುಕೊಂಡು ಅದಕ್ಕೆ ಅವಕಾಶ ಮಾಡಿಕೊಡುವ ಬಗ್ಗೆ ಚಿಂತಿಸುವಂತೆ ಸಲಹೆ ನೀಡಲಾಗಿದೆ ಎಂದರು.
ಸಮಿತಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವಿಜಯ್ ಕುಮಾರ್, ಬೆಳಪು ಪಿಡಿಒ ಪ್ರವೀಣ್ ಡಿಸೋಜ, ಕಾರ್ಯದರ್ಶಿ ಚಂದ್ರಾವತಿ, ನಿಕಟಪೂರ್ವ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮತ್ತಿತರರಿದ್ದರು.

ಕ್ರೀಡೆ, ಶಿಕ್ಷಣ ಕೇಂದ್ರ ಅಥವಾ ವಸತಿ ಶಾಲೆ ಕಾರ್ಯಗತ ಮಾಡಬಹುದೆ ಎನ್ನುವ ಬಗ್ಗೆಯೂ ಉಪಕುಲಪತಿ ಹಾಗೂ ಜಿಲ್ಲಾಧಿಕಾರಿಯೊಂದಿಗೆ ವಾತುಕತೆ ನಡೆಸಲಾಗಿದೆ. ಇನ್ನೂ ಹೆಚ್ಚಿನ ಮೂವತ್ತು- ನಲ್ವತ್ತು ಎಕರೆ ಜಮೀನು ಲಭ್ಯವಾದಲ್ಲಿ ಮುಖ್ಯಮಂತ್ರಿಯೊಂದಿಗೆ ವಾತನಾಡಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೂ ಅಲೋಚನೆ ವಾಡಲಾಗುವುದು.

— ಮಂಜುನಾಥ ಭಂಡಾರಿ ವಿಧಾನ ಪರಿಷತ್ ಸದಸ್ಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net