

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಮೀನುಗಾರರಿಗೆ ಸಂಬಂಧಿಸಿ ಸಲ್ಲಿಸಿದ ಬೇಡಿಕೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಷ್ಠಾನಕ್ಕೆ ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ಶ್ರೀಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ರ ಅಂಗವಾಗಿ ಗುರುವಾರ ಭೇಟಿ ನೀಡಿ, ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮಹಿಳಾ ದಸರಾ ಉದ್ಘಾಟಿಸಿ ಮಾತನಾಡಿದರು.
ಕರಾವಳಿ ಹಾಗೂ ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೊಳಿಸುವ ಮೂಲಕ ಉದ್ಯೋಗ ಸೃಷ್ಟಿಸಲಾಗುವುದು. ಚುನಾವಣೆ ಮುನ್ನ ಘೋಷಿಸಿದ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ. ಅದರಲ್ಲೂ ಮೂರು ಗ್ಯಾರಂಟಿಗಳನ್ನು ಹೆಣ್ಣು ಮಕ್ಕಳಿಗೆ ನೀಡಿದ್ದೇವೆ. ಭಾರತ್ ಜೋಡೋ ಯುವ ಸಂಘಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.
ಕಲೆ, ಧಾರ್ಮಿಕ ಹಾಗೂ ಸಂಸ್ಕೃತಿ ಉಳಿವಿಗೆ ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡುವ ಮೂಲಕ ಭಾಷೆಗೆ ಗೌರವವನ್ನು ಮುಖ್ಯಮಂತ್ರಿಯಾಗಿ ಮಾಡಿದ್ದೇನೆ. ಐತಿಹಾಸಿಕ ಪರಂಪರೆ ಉಳ್ಳಂತಹ ಪ್ರದೇಶ ಕರಾವಳಿ. ಅಲೆ ಇಲ್ಲದಿದ್ದರೆ ಸಮುದ್ರಕ್ಕೆ ಬೆಲೆ ಇಲ್ಲ. ರಾಜ್ಯಕ್ಕೆ ಕರಾವಳಿ ಇಲ್ಲದಿದ್ದರೆ ಗೌರವ ಇಲ್ಲ. ಎಲ್ಲ ದೇವ, ದೇವತೆಗಳ ಶಕ್ತಿ ಕರಾವಳಿ. ಕರಾವಳಿ ಪ್ರದೇಶ ಧರ್ಮದ ಪ್ರತೀಕ. ದೇವಸ್ಥಾನ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಇಡೀ ದೇಶಕ್ಕೆ ಬ್ಯಾಂಕ್ ನೀಡುವ ಮೂಲಕ ದೇಶಕ್ಕೆ ಆರ್ಥಿಕ ವ್ಯವಸ್ಥೆಗೆ ಹೊಸ ನೋಟ ಕೊಟ್ಟಿರುವುದು ಕರಾವಳಿ ಜಿಲ್ಲೆ. ಸ್ವಾಭಿಮಾನದ ಬದುಕು ಇರಬೇಕು ಎಂಬ ಚಿಂತನೆ, ನಾಯಕತ್ವದ ಗುಣದೊಂದಿಗೆ ಸೌಹಾರ್ದ ಮೂಡುವ ಮೂಲಕ ಮಾನವ ಧರ್ಮ ಬೆಳೆಯಲಿ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು. ಸಚಿವ ಯು.ಟಿ.ಖಾದರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭಾ ಉಪಸಭಾಪತಿ ಮಂಕಾಳ ವೈದ್ಯ, ಶಾಸಕ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುವಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ವಾಜಿ ಶಾಸಕ ಲಾಲಾಜಿ ಮೆಂಡನ್, ಗೋಪಾಲ್ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಮೋಹನ್ ಬೇಂಗ್ರೆ, ಆನಂದ ಸಿ.ಕುಂದರ್, ವಿನಯ ಕರ್ಕೇರ, ಕವಿತಾ ಶರತ್, ಸುಗುಣಾ ಕರ್ಕೇರ, ಸಂಧ್ಯಾದೀಪ ಸುನಿಲ್, ಗಿರಿಧರ ಸುವರ್ಣ, ರತ್ನಾಕರ ಸಾಲ್ಯಾನ್, ಸುಜಿತ್ ಸಾಲ್ಯಾನ್, ವೇದ ಪ್ರಕಾಶ್ ಶ್ರೀಯಾನ್, ರವೀಶ್ ಕೊರವಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ದಾಮೋದರ ಶರ್ಮ ನಿರೂಪಿಸಿದರು.
ನಂತರ ಶಾರದಾ ವಾತೆ ಪ್ರತಿಮೆಗೆ ಪೂಜೆ ಸಲ್ಲಿಸಿದ ಸಿಎಂ, ಮೊಗವೀರ ಸಮಾಜದ ಕುಲಗುರು ಕೀರ್ತಿಶೇಷ ಮಾಧವ ಮಂಗಲ ಪೂಜ್ಯರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ದೇವಾಲಯದ ವಸ್ತುಪ್ರದರ್ಶನ ಆವರಣದಲ್ಲಿ ವಿವಿಧ ಧಾನ್ಯಗಳಿಂದ ರಚಿಸಿದ ತಮ್ಮದೇ ಕಲಾಕೃತಿಯನ್ನು ಅನಾವರಣಗೊಳಿಸಿದರು. ಇದೇ ವೇಳೆ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಿದ ಮುಖ್ಯಮಂತ್ರಿಯನ್ನು ಗೌರವಿಸಲಾಯಿತು. ಕ್ಷೇತ್ರಕ್ಕಾಗಿ ವಿಶೇಷ ಸೇವೆ ಸಲ್ಲಿಸುತ್ತಿರುವ ಹರಿಯಪ್ಪ ಕೋಟ್ಯಾನ್ ಹಾಗೂ ಸುರೇಶ್ ಕಾಂಚನ್ ಅವರನ್ನು ಸನ್ಮಾನಿಸಲಾಯಿತು.
ಕರಾವಳಿ ಜಿಲ್ಲೆಯಲ್ಲಿರುವ ಬಂದರುಗಳ ಅಭಿವೃದ್ಧಿ, ಹೆಜವಾಡಿ ಬಂದರಿಗೆ ರಾಜ್ಯ ಸರ್ಕಾರದಿಂದ ಶೀಘ್ರ ಬಿಡುಗಡೆಗೊಳಿಸಿ ಉದ್ಘಾಟಿಸುವಂತೆ, ಮಹಿಳಾ ಮೀನುಗಾರರಿಗೆ ಬಡ್ಡಿ ರಹಿತ ಮೂರು ಲಕ್ಷ ರೂ. ಸಾಲ ನೀಡಬೇಕು.
ನಾಡೋಜ ಜಿ.ಶಂಕರ್, ಅಧ್ಯಕ್ಷ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ