ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಆತ್ಮಹತ್ಯೆ
ಆತ್ಮಹತ್ಯೆ
Published on: 

ಕುಂದಾಪುರ: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಕೋಟೇಶ್ವರದ ಗೋಪಾಡಿ ಗ್ರಾಮದ ರಾಮ ಮಡಿವಾಳ(70) ಎಂಬುವರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗೆ ಕಾರು ಡಿಕ್ಕಿ, ಸವಾರ ಗಂಭೀರ

ಕುಂದಾಪುರ: ಕುಂಭಾಶಿ ಗ್ರಾಮದ ಕುಂಭಾಶಿ ಸ್ವಾಗತ ಗೋಪುರದ ಬಳಿ ರಾ.ಹೆ. 66ರಲ್ಲಿ ಕಾರೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿಯಾಗಿ ಬೈಕ್ ಸಹಸವಾರ ಶ್ರೀನಿವಾಸ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಏಕಾಏಕಿ ಎಡಕ್ಕೆ ಚಲಾಯಿಸಿದ ವೇಳೆ ತೆಕ್ಕಟ್ಟೆ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಿಂದ ಗಾಯಗೊಂಡ ಶ್ರೀನಿವಾಸ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಸವಾರಗೆ ಗಾಯ

ಕುಂದಾಪುರ: ಹಂಗಳೂರು ಗ್ರಾಮದ ಎಂ.ಕೋಡಿ ವಿನಾಯಕ ರೋಡ್‌ನಲ್ಲಿ ಕಾರೊಂದು ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಕೋಟೇಶ್ವರ ಗ್ರಾಮದ ರಾಮ(54) ಎಂಬುವರು ಗಾಯಗೊಂಡಿದ್ದಾರೆ. ರಾಮ ಅವರು ಕುಂದಾಪುರದ ಗಾಂಧಿ ಮೈದಾನಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾರೊಂದು ಓವರ್‌ಟೇಕ್ ಮಾಡಿ ಬೈಕ್‌ನ ಮುಂದೆ ಹೋಗಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬೈಕ್ ಕಾರಿನ ಹಿಂಬದಿಗೆ ಡಿಕ್ಕಿಯಾಗಿದೆ. ಬೈಕ್ ಸವಾರನನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net