ಪೂಜೆ ವೇಳೆ ಸೀರೆಗೆ ಆಕಸ್ಮಿಕ ಬೆಂಕಿ ತಗಲಿ ವೖದ್ಧೆ ಸಾವು

AI ಚಿತ್ರ
AI ಚಿತ್ರ
Published on
ಉಡುಪಿ: ಚೂಡಿ ಪೂಜೆ ನೆರವೇರಿಸುತ್ತಿದ್ದಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಾಗಿ ತೀವ್ರ ಗಾಯಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೖತಪಟ್ಟ ಘಟನೆ ನಡೆದಿದೆ.
ಕಿನ್ನಿಮುಲ್ಕಿಯ ವೇಗಸ್‌ ಟೌನ್‌ಶಿಪ್‌ ನಿವಾಸಿ ಜಯಂತಿ ಮಲ್ಯ (80) ಮೖತಪಟ್ಟ ದುರ್ದೈವಿ. ಆಗಸ್ಟ್‌ 16ರಂದು ಮಧ್ಯಾಹ್ನ 12:30ರ ಸುಮಾರಿಗೆ ಮನೆಯ ಅಂಗಳದ ತುಳಸಿಕಟ್ಟೆಯಲ್ಲಿ ಶ್ರಾವಣ ಮಾಸದ ಚೂಡಿ ಪೂಜೆ ನೆರವೇರಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ಹೊತ್ತಿಕೊಂಡು ತೀವ್ರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ, ಒಳರೋಗಿಯಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಜಯಂತಿ ಮಲ್ಯ ಅವರು ಮಂಗಳವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net