ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ರಸ್ತೆ ಪಕ್ಕದ ಮಣ್ಣು ಇನ್ನಷ್ಟು ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ದರೆಯ ಮೇಲಿರುವ ಕಂಬದಿಂದ ವಿದ್ಯುತ್ ತಂತಿಗಳು ರಸ್ತೆಯ ಕೆಳಭಾಗದಲ್ಲಿರುವ ಮನೆಗಳ ಮೇಲಿನಿಂದ ಹಾದು ಹೋಗಿದ್ದು ಕಂಬ ಉರುಳಿದರೆ ಅನಾಹುತ ಸಂಭವಿಸುವ ಭೀತಿ ಎದುರಾಗಿದೆ. ವಿದ್ಯುತ್ ಕಂಬವನ್ನು ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.