ನಾವೂರು ಗ್ರಾಮದ ಪುಳಿತ್ತಡಿ, ಎರ್ಮಲೆ ಹಾಗೂ ಕಾಸ್ರೋಳಿ ಎಸ್‌ಟಿ ಕಾಲನಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 0.3189 ಹೆಕ್ಟೇರ್ ಪ್ರದೇಶದಲ್ಲಿ 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗ ಅಳವಡಿಸಲು ಅನುಮತಿ ನೀಡಲಾಗಿದೆ. ಕುತ್ಲೂರು ಗ್ರಾಮದ ಬರೆಂಗಡಿ, ಅಂಜರೊಟ್ಟು, ಎರ್ಡಾಡಿ, ನಂಗಾಜೆ, ಪಂಜಾಳ, ಕೊಟ್ಟೆಂದಡ್ಕ, ಅಳಂಬ ಹಾಗೂ ಬಾರ್ಥಾಜೆ ಪ್ರದೇಶಗಳ ಮನೆಗಳಿಗೆ ವಿದ್ಯುತ್ ಕಲ್ಪಿಸಲು 11 ಕೆ.ವಿ. ವಿದ್ಯುತ್ ಮಾರ್ಗದ ಭೂಗತ ಕೇಬಲ್ ಅಳವಡಿಸುವ ಯೋಜನೆಗೆ ಅನುಮತಿ ದೊರೆತಿದೆ.