

ಕುಂದಾಪುರ: ಉದ್ಯೋಗ ನಿಮಿತ್ತ ಭಾನುವಾರ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ಚುಂಗಿಗುಡ್ಡೆ ನಿವಾಸಿ ನಾರಾಯಣ ಹೆಬ್ಬಾರ್ ಎಂಬುವರ ಪುತ್ರ ಅಕ್ಷಯ್ ಎನ್.ಹೆಬ್ಬಾರ್(26) ಚನ್ನರಾಯಪಟ್ಟಣ ಸಮೀಪ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿದ್ದ ಅವರು ದೀಪಾವಳಿ ಹಬ್ಬದ ರಜೆಯಲ್ಲಿ ಊರಿಗೆ ಬಂದಿದ್ದರು. ಭಾನುವಾರ ಬೆಳಗ್ಗೆ 4ಕ್ಕೆ ಮನೆಯಿಂದ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಮಧ್ಯಾಹ್ನ ಚನ್ನರಾಯಪಟ್ಟಣ ಸಮೀಪ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಕ್ಷಯ್ ಅವರು ನಾರಾಯಣ ಹೆಬ್ಬಾರ್ ದಂಪತಿಯ ಏಕೈಕ ಪುತ್ರರಾಗಿದ್ದರು.