ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

 ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಡಲಾಮೆ ಸಂರಕ್ಷಣೆ, ಪ್ಲಾಸ್ಟಿಕ್ ನಿಷೇಧ ಕಾರ್ಯಾಗಾರ ನಡೆಯಿತು. ಪ್ರಭಾಕರ ಕುಂಭಾಶಿ, ಐ.ನಾರಾಯಣ, ನಾಗರಾಜ್ ಖಾರ್ವಿ ಇತರರು ಇದ್ದರು.
ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಡಲಾಮೆ ಸಂರಕ್ಷಣೆ, ಪ್ಲಾಸ್ಟಿಕ್ ನಿಷೇಧ ಕಾರ್ಯಾಗಾರ ನಡೆಯಿತು. ಪ್ರಭಾಕರ ಕುಂಭಾಶಿ, ಐ.ನಾರಾಯಣ, ನಾಗರಾಜ್ ಖಾರ್ವಿ ಇತರರು ಇದ್ದರು.
Published on
ಕುಂದಾಪುರ: ಯಾವುದೇ ವೃತ್ತಿಯಾದರೂ ಅದರ ಬಗ್ಗೆ ಗೌರವ ಇರಬೇಕು. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಬೇಕು. ಪರಿಸರ ರಕ್ಷಣೆ ಮುಖ್ಯವಾಗಿದ್ದು, ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮಹತ್ಕಾರ್ಯದಲ್ಲಿ ಮಕ್ಕಳು ಕೈಜೋಡಿಸಿದರೆ ದೇಶ ಉದ್ಧಾರವಾಗಲು ಸಾಧ್ಯ ಎಂದು ರೋಟರಿ ಡಿಸ್ಟ್ರಿಕ್ಟ್ ಚೇರ್ಮನ್ ಪ್ರಭಾಕರ ಕುಂಭಾಶಿ ಹೇಳಿದರು.
ಗಂಗೊಳ್ಳಿ ರೋಟರಿ ಕ್ಲಬ್ ಹಾಗೂ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ ಶಾಲೆಯಲ್ಲಿ ಬುಧವಾರ ಜರುಗಿದ ಪರಿಸರ ಹಾಗೂ ಕಡಲಾಮೆ ಸಂರಕ್ಷಣೆ, ಪ್ಲಾಸ್ಟಿಕ್ ನಿಷೇಧ ಕಾರ್ಯಾಗಾರ ಮತ್ತು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರೋಟರಿ ವಲಯ-1ರ ಅಸಿಸ್ಟೆಂಟ್ ಗವರ್ನರ್ ಐ.ನಾರಾಯಣ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ನಾಗರಾಜ್ ಖಾರ್ವಿ ಮಾಹಿತಿ ನೀಡಿದರು. ಅಶೋಕ ಭಂಡಾರಿ ತ್ರಾಸಿ, ಶಂಕರ ಪೂಜಾರಿ ಗಂಗೊಳ್ಳಿ, ಅನಿಲ್ ಹೆಮ್ಮಾಡಿ ಮತ್ತು ಖಲೀಫೆ ಅಬ್ದುಲ್ ಮಜೀದ್ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ, ಪ್ರಭಾರ ಮುಖ್ಯಶಿಕ್ಷಕಿ ಉಷಾ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಸ್ವಾಗತಿದರು. ಶಿಕ್ಷಕಿ ಅನುಷಾ ಸಿ.ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಕಾರ್ಯದರ್ಶಿ ರಾಮನಾಥ ಚಿತ್ತಾಲ್ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net